ಲಕ್ಷ್ಮೇಶ್ವರ: ಜಿಲ್ಲಾಡಳಿತದ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ತಾಲ್ಲೂಕಿನ ಗೋವನಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಧಿಕಾರಿಎಂ.ಸುಂದರೇಶ ಬಾಬು ಗ್ರಾಮ ವಾಸ್ತವ್ಯ ನಡೆಸಿದರು.
ಜಿಲ್ಲಾಧಿಕಾರಿ, ಶಾಸಕ ರಾಮಣ್ಣ ಲಮಾಣಿ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯದರ್ಶಿ ಭರತ ಎಸ್, ಉಪಕಾರ್ಯದರ್ಶಿ ಬಿ.ಕಲ್ಲೇಶ, ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ತಹಶೀಲ್ದಾರ್ ಪರಶುರಾಮ ಸತ್ತಿಗೇರಿ, ತಾ.ಪಂ ಇಒ ಆರ್.ವೈ. ಗುರಿಕಾರ. ಸಿ.ಆರ್. ಮುಂಡರಗಿ ಅವರು ಆಗಮಿಸುತ್ತಿದ್ದಂತೆ ಗ್ರಾಮಸ್ಥರು ಹೂಮಾಲೆ ಹಾಕಿ, ತಿಲಕ ಇಟ್ಟು, ಆರತಿ ಬೆಳಗಿ ಸ್ವಾಗತಿಸಿದರು.
ಶಾಸಕ ರಾಮಣ್ಣ ಲಮಾಣಿ ಶಾಲಾ ಪೌಷ್ಟಿಕ ತೋಟದಲ್ಲಿನ ಸಸಿಗಳಿಗೆ ನೀರು ಉಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನಿಡಿದರು.
ಶಾಸಕ ಹಾಗೂ ಅಧಿಕಾರಿಗಳ ತಂಡ ಪ್ರಾಥಮಿಕ ಶಾಲೆಯಲ್ಲಿನ ನೂತನ ಅಡುಗೆ ಕೊಠಡಿ, ಅಂಗನವಾಡಿ ಕೇಂದ್ರ ಉದ್ಘಾಟಸಿದರು. ನಂತರ ಬೆಳಕು ಯೋಜನೆಯಡಿ ವಿದ್ಯುತ್ ಸಂಪರ್ಕ ಕಲ್ಪಿಸಿದ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಗ್ರಾಮದ ಸ್ಮಶಾನ ಭೂಮಿ ಹಾಗೂ ಘನತ್ಯಾಜ್ಯ ಘಟಕಗಳ ಕಟ್ಟಡಗಳ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು. ನರೇಗಾ ಯೋಜನೆಯಡಿ ಕೆರೆ ಹೂಳೆತ್ತುವ ಕಾಮಗಾರಿ ವೀಕ್ಷಿಸಿ ಕೂಲಿಕಾರರೊಂದಿಗೆ ಸಮಸ್ಯೆ ಕುರಿತು ಚರ್ಚಿಸಿದರು.
ಒಡೆಯರ ಮಲ್ಲಾಪೂರದ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಶಾಲೆಯಲ್ಲಿಯೇ ಮಕ್ಕಳೊಂದಿಗೆ ಊಟ ಮಾಡಿದ್ದು ವಿಶೇಷವಾಗಿತ್ತು. ನಂತರ ಗೋವನಾಳದ ಸರ್ಕಾರಿ ಪ್ರಾಥಮಿಕ ಶಾಲೆಗೆ ಆಗಮಿಸಿ
ಸಮಸ್ಯೆ ಪರಿಹಾರ ಕೋರಿ ಬಂದಿರುವ ಅರ್ಜಿಗಳ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.
ಗ್ರಾ.ಪಂ ಅಧ್ಯಕ್ಷೆ ಸುಶೀಲವ್ವ ಮರಿಲಿಂಗನಗೌಡರ, ಗ್ರಾ.ಪಂ ಉಪಾಧ್ಯಕ್ಷೆ ಸುಧಾ ಮಾದರ, ಮಂಜನಗೌಡ ಕೆಂಚನಗೌಡರ, ಪದ್ಮರಾಜ ಪಾಟೀಲ, ನಿರ್ಮಲಾ ತಳವಾರ, ನಾಗರತ್ನಾ ಕಡಾರಿ, ಅಪ್ಪಣ್ಣ ರಾಮಗೇರಿ, ಭರಮಣ್ಣ ರೊಟ್ಟಿಗವಾಡ, ನಾಗರಾಜ ದೊಡ್ಡಮನಿ, ಚಂದ್ರು ತಳವಾರ, ಶೇಖರಗೌಡ ಕೊರಡೂರ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.