ಭಾನುವಾರ, ಸೆಪ್ಟೆಂಬರ್ 20, 2020
23 °C

ಕಲುಷಿತ ನೀರು ಸೇವನೆ:25ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನರಗುಂದ: ಕಲುಷಿತ ನೀರು ಸೇವನೆಯಿಂದ ಪಟ್ಟಣದ 25ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು, ಸರ್ಕಾರಿ ಆಸ್ಪತ್ರೆಗೆ ದಾಖಲಾದ ಘಟನೆ ಸೋಮವಾರ ನಡೆದಿದೆ.

ಪಟ್ಟಣದ ದಂಡಾಪೂರ, ದೇಸಾಯಿಭಾವಿ ಓಣಿ, ಅರ್ಭಾಣ ಓಣಿಯ ನಳಗಳಿಗೆ  ಕಲುಷಿತ ನೀರು ಪೂರೈಕೆಯಾಗಿದ್ದು, ಇದನ್ನು ಕುಡಿದ ಜನರು ವಾಂತಿ, ಭೇದಿಯಿಂದ ಬಳಲಿದರು. ತೀವ್ರವಾಗಿ ಅಸ್ವಸ್ಥಗೊಂಡ ರೋಗಿಗಳನ್ನು ದಾಖಲಿಸಿಕೊಂಡು ಚಕಿತ್ಸೆ ನೀಡಲಾಗುತ್ತಿದೆ, ಇನ್ನುಳಿದವರಿಗೆ ಚಿಕಿತ್ಸೆ ನೀಡಿ ಕಳುಹಿಸಲಾಗಿದೆ ಎಂದು ವೈದ್ಯರು ತಿಳಿಸಿದರು.

ಕುಡಿಯುವ ನೀರು ಪೂರೈಸುವ ಪೈಪ್‌ಗಳು ಅಲ್ಲಲ್ಲಿ ಒಡೆದಿದ್ದು, ಕಲುಷಿತ ನೀರು ಮಿಶ್ರಣವಾಗುತ್ತಿದೆ. ಕೆಲವೊಮ್ಮೆ ಚರಂಡಿ ನೀರು, ಕುಡಿಯುವ ನೀರಿನ ಜತೆಗೆ ಮಿಶ್ರಣಗೊಳ್ಳುತ್ತದೆ ಎಂದು ಸಾರ್ವಜನಿಕರು ದೂರಿದರು.

ಸೋಮವಾರ ತಹಶೀಲ್ದಾರ್ ಆಶಪ್ಪ ಅವರು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಪುರಸಭೆ ಸಿಬ್ಬಂದಿ ಕರೆಯಿಸಿ, ಕಲುಷಿತ ನೀರು ಪೂರೈಕೆ ಬಗ್ಗೆ ಪರಿಶೀಲಿಸಿ, ವರದಿ ನೀಡುವಂತೆ ಸೂಚಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.