ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳಿಗೆ ಏನು ಕೆಲಸ?: ಲೋಕಾಯುಕ್ತ ಡಿವೈಎಸ್‍ಪಿ

Published 13 ಮಾರ್ಚ್ 2024, 15:27 IST
Last Updated 13 ಮಾರ್ಚ್ 2024, 15:27 IST
ಅಕ್ಷರ ಗಾತ್ರ

ಲಕ್ಷ್ಮೇಶ್ವರ: ‘ಯಾವುದೇ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಅನಧಿಕೃತ ವ್ಯಕ್ತಿಗಳನ್ನು ಬಿಟ್ಟುಕೊಳ್ಳಬಾರದು. ಅನಧಿಕೃತ ವ್ಯಕ್ತಿಗಳಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ ಎಂಬ ಬಗ್ಗೆ ದೂರುಗಳು ಬಂದಿವೆ’ ಎಂದು ಲೋಕಾಯುಕ್ತ ಡಿವೈಎಸ್‍ಪಿ ವಿಜಯ ಬಿರಾದಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿನ ಪುರಸಭೆ ಸಭಾ ಭವನದಲ್ಲಿ ಬುಧವಾರ ಜರುಗಿದ ಸಾರ್ವಜನಿಕ ಕುಂದುಕೊರತೆ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ ಉದ್ಧೇಶಿಸಿ ಅವರು ಮಾತನಾಡಿದರು.

‘ಪಟ್ಟಣದ ಉಪನೋಂದಣಿ ಕಚೇರಿ ಸೇರಿದಂತೆ ಎಲ್ಲ ಕಚೇರಿಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿಕೊಳ್ಳಬೇಕು. ವಸತಿ ನಿಲಯಗಳಲ್ಲಿ ವಾರ್ಡನ್ ಇರುವಂತೆ ಜಾಗೃತೆ ವಹಿಸಬೇಕು. ಕೆಲ ವಸತಿ ನಿಲಯಗಳಲ್ಲಿ ಕಳಪೆ ತರಕಾರಿ ಬಳಸುತ್ತಿರುವುದು ಕಂಡು ಬಂದಿದೆ. ಈ ಕುರಿತು ಎಚ್ಚರಿಕೆ ವಹಿಸಬೇಕು. ಅದರೊಂದಿಗೆ ಕುಡಿಯಲು ಶುದ್ಧ ನೀರನ್ನು ಪೂರೈಸಬೇಕು. ಒಂದು ವರ್ಷದಿಂದ ಅಂಗನವಾಡಿಗಳಿಗೆ ಹಾಲಿನ ಪುಡಿ ಪೂರೈಕೆ ಆಗುತ್ತಿಲ್ಲ. ಈ ಕುರಿತು ಅಧಿಕಾರಿಗಳು ಗಮನ ಹರಿಸಬೇಕು. ಯಾವುದೇ ಇಲಾಖೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಅಗದಂತೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು’ ಎಂದು ಹೇಳಿದರು.

ಪಟ್ಟಣದಲ್ಲಿ ಪುರಸಭೆಯ ನಗರೋತ್ಥಾನದ ಯೋಜನೆಯಡಿ ಅಪೂರ್ಣ ಕೆಲಸ ಮಾಡಿದವರಿಗೆ ಮತ್ತೆ ಕೆಲಸ ಕೊಡಲಾಗಿದೆ. ಈ ಕುರಿತು ಕ್ರಮಕೈಗೊಳ್ಳಬೇಕು ಮತ್ತು ಶಿಗ್ಲಿ ಕ್ರಾಸ್‍ನಿಂದ ಅಂಚೆ ಕಚೇರಿವರೆಗೆ ಮುಖ್ಯ ರಸ್ತೆಗೆ ಡಿವೈಡರ್ ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡಬೇಕು’ ಎಂದು ಅಲ್ತಾಫ್‌ ಹವಾಲ್ದಾರ ಮನವಿ ಮಾಡಿದರು.

ಸ್ಲಂ ಬೋರ್ಡ್ ವತಿಯಿಂದ ನಡೆಯುತ್ತಿರುವ ಮನೆ ನಿರ್ಮಾಣ ಕಾಮಗಾರಿ ಕಳಪೆ ಆಗಿದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಸದಾನಂದ ನಂದೆಣ್ಣವರ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಲೋಕಾಯುಕ್ತ ಇಲಾಖೆ ರವಿ ಪುರುಷೊತ್ತಮ, ಸಾಹೂಬಾಯಿ ತೇಲಿ, ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ ಮತ್ತು ಲೋಕಾಯಕ್ತ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT