ಭಾನುವಾರ, ಏಪ್ರಿಲ್ 11, 2021
32 °C

ಕಪ್ಪತ್ತಗುಡ್ಡದಲ್ಲಿ ಮತ್ತೆ ಬೆಂಕಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಡಂಬಳ (ಗದಗ): ಡಂಬಳ ಹೋಬಳಿ ಡೋಣಿ ಸಮೀಪದ ಕೆಂಪುಗುಡ್ಡದಲ್ಲಿ ಗುರುವಾರ ಮಧ್ಯಾಹ್ನ ಮತ್ತೆ ಬೆಂಕಿ ಕಾಣಿಸಿಕೊಂಡಿದ್ದು ಅಂದಾಜು 50–60 ಹೆಕ್ಟೇರ್‌ ಅರಣ್ಯ ಬೆಂಕಿಗೆ ಆಹುತಿಯಾಗಿದೆ. 

ಮುಂಡರಗಿ, ಶಿರಹಟ್ಟಿ, ಗದಗ ವಲಯದ ಅರಣ್ಯ ಇಲಾಖೆಯ 70ಕ್ಕೂ ಅಧಿಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಗುರುವಾರ ತಡರಾತ್ರಿವರೆಗೂ ಕಾರ್ಯಾಚರಣೆ ನಡೆಯಿತು.

‘ಗುರುವಾರ ಬಿದ್ದಿರುವ ಬೆಂಕಿಯಿಂದ ಅಂದಾಜು 50ರಿಂದ 60 ಹೆಕ್ಟೇರ್‌ ಅರಣ್ಯ ನಾಶವಾಗಿದೆ. ಬೆಂಕಿ ನಂದಿಸಲು ಎಲ್ಲರೂ ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದೇವೆ’ ಎಂದು ಅರಣ್ಯ ಇಲಾಖೆ ಸಿಬ್ಬಂದಿ ಪ್ರದೀಪ್‌ ಪವಾರ್‌ ತಿಳಿಸಿದ್ದಾರೆ.

ಕಪ್ಪತ್ತಗುಡ್ಡವನ್ನು ಅತಿಕ್ರಮಣ ಮಾಡಿಕೊಂಡು ಸಾಗುವಳಿ ಮಾಡುತ್ತಿರುವವರ ವಿರುದ್ಧ ಪ್ರಕರಣ ದಾಖಲು ಮಾಡಿ ಜಮೀನುಗಳನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡಿದ್ದರಿಂದ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಈ ಘಟನೆ ಪದೇ ಪದೇ ನಡೆಯುತ್ತಿದೆ ಎಂದು ಹೆಸರು ಹೇಳಲು ಇಚ್ಛಿಸದ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು