ರೋಣ: ‘12ನೇ ಶತಮಾನದಲ್ಲಿ ಸಮಾಜ ಸುಧಾರಣೆಯ ಚಳವಳಿಯಾಗಿ ಬೆಳೆದು ಬಂದ ವಚನ ಸಾಹಿತ್ಯಕ್ಕೆ ಮಹಿಳಾ ಸಾಹಿತಿಗಳ ಕೊಡುಗೆಯು ಅಪಾರವಾಗಿದೆ’ ಎಂದು ಕದಳಿ ಮಹಿಳಾ ವೇದಿಕೆ ತಾಲ್ಲೂಕು ಘಟಕ ಉಪಾಧ್ಯಕ್ಷೆ ಲಕ್ಷ್ಮಿ ಕೆಂಚರಡ್ಡಿ ಹೇಳಿದರು.

ಪಟ್ಟಣದ ಗೌಡರ ಓಣಿಯಲ್ಲಿ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ಮಹಿಳಾ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಡೆದ ಶ್ರಾವಣದ ವಚನ ಸುಧೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ‘ಅಕ್ಕಮಹಾದೇವಿ, ಆಯ್ದಕ್ಕಿ ಲಕ್ಕಮ್ಮ, ಅತ್ತಿಮಬ್ಬೆ ಸೇರಿದಂತೆ ಹಲವು ಶ್ರೇಷ್ಠ ಮಹಿಳಾ ಸಾಧಕೀಯರು ತಮ್ಮ ವಚನಗಳ ಮೂಲಕ ಸಮಾಜದ ಮೌಡ್ಯಗಳನ್ನು ನಿರ್ಮೂಲನೆಗೊಳಿಸುವಲ್ಲಿ ವಚನ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ’ ಎಂದರು.

ಶರಣ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕ ಅಧ್ಯಕ್ಷ ಪಂಚಯ್ಯ ಹಿರೇಮಠ ಮಾತನಾಡಿ, ‘ನಾಡಿನ ಶರಣರು ಸಾಹಿತ್ಯದ ಮೂಲಕ ಜೀವನ ಮಾರ್ಗಗಳನ್ನು ಜನಸಾಮಾನ್ಯರ ಮನಮುಟ್ಟುವಂತೆ ಹೇಳಿದ್ದಾರೆ. ಕಾರ್ಯಕ್ರಮದ ಮೂಲಕ ಪ್ರತಿಯೊಬ್ಬರಿಗೂ ತಲುಪಿಸುವ ಕಾರ್ಯದಲ್ಲಿ ಶರಣ ಸಾಹಿತ್ಯ ಪರಿಷತ್ ಹಾಗೂ ಕದಳಿ ಮಹಿಳಾ ವೇದಿಕೆ ಶ್ರಮಿಸುತ್ತಿವೆ’ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಪ್ರೀಮಿಯರ್ ಲೀಗ್ ಕಬಡ್ಡಿ ಪಂದ್ಯಾವಳಿಗೆ ಆಯ್ಕೆಯಾದ ದಾವಲ್ ಮಲ್ಲಿಕ್ ಇದ್ಲಿ, ಅಥ್ಲೆಟಿಕ್ಸ್ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಸಾದಿಕ್ ಇದ್ಲಿ ಅವರನ್ನು ಸನ್ಮಾನಿಸಲಾಯಿತು.

ಶಶಿಕಲಾ ಪಾಟೀಲ, ಅನ್ನಪೂರ್ಣಮ್ಮ ನಾಡಗೌಡ್ರ, ಈರಮ್ಮ ಪಾಟೀಲ, ಶ್ರೀದೇವಿ ನವಲಗುಂದ, ಮಹಾದೇವಗೌಡ ಪಾಟೀಲ, ಶಕುಂತಲಾ ಬಗಲಿ, ಮಂಜುನಾಥ ಪಾಟೀಲ, ಶರಣು ಪೂಜಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.