ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮನ್ವಯದಿಂದ ಕಾರ್ಯನಿರ್ವಹಿಸಿ: ಜಿಲ್ಲಾಧಿಕಾರಿ ಎಂ.ಸುಂದರೇಶ್‌ಬಾಬು

ಅಲೆಮಾರಿ, ಅರೆ ಅಲೆಮಾರಿ ಜನಾಂಗದ ಪ್ರಗತಿ ಪರಿಶೀಲನಾ ಸಭೆ
Last Updated 8 ಸೆಪ್ಟೆಂಬರ್ 2020, 1:39 IST
ಅಕ್ಷರ ಗಾತ್ರ

ಗದಗ: ‘ನಿವೇಶನ ಹಾಗೂ ಮನೆ ರಹಿತ ಅಲೆಮಾರಿ, ಅರೆ ಅಲೆಮಾರಿ ಕುಟುಂಬಗಳ ಪಟ್ಟಿಯನ್ನು ಸಮುದಾಯದ ಸಹಕಾರ
ದೊಂದಿಗೆ ಸಿದ್ಧಪಡಿಸಬೇಕು. ಈ ಕುರಿತಾಗಿ ನಡೆಯುತ್ತಿರುವ ಸಮೀಕ್ಷೆಯನ್ನು ಶೀಘ್ರವೇ ಪೂರ್ಣಗೊಳಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್‌ಬಾಬು ಅಧಿಕಾರಿಗಳಿಗೆ ಸೂಚಿಸಿದರು.

ಗದಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಈಗಾಗಲೇ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಗುರುತಿಸಿ ಪಟ್ಟಿ ಮಾಡಿರುವ ನಿವೇಶನ ಹಾಗೂ ಮನೆ ರಹಿತ ಕುಟುಂಬ
ಗಳನ್ನು ಪರಿಶೀಲಿಸಬೇಕು. ಯೋಜನೆಯ ಸೌಲಭ್ಯ ಪಡೆಯದ ಕುಟುಂಬಗಳಿಗೆ ಆದ್ಯತೆ ನೀಡಬೇಕು ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯ್ತಿ ಸಿಇಒ ಡಾ.ಆನಂದ್ ಕೆ. ಮಾತನಾಡಿ, ‘ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ಪ್ರತಿಯೊಬ್ಬರಿಗೂ ಸರ್ಕಾರದ ಸೌಲಭ್ಯ ದೊರೆಯುವಂತೆ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು’ ಎಂದು ಸೂಚಿಸಿದರು.‌

ಮುಂಡರಗಿ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಬಳ್ಳಾರಿ ಮಾತನಾಡಿ, ‘ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲಕ್ಕಾಗಿ ಪ್ರತಿ ವಿದ್ಯಾರ್ಥಿಗೆ ಹತ್ತು ತಿಂಗಳವರೆಗೆ ವಿಶೇಷ ಪ್ರೋತ್ಸಾಹಧನ ನೀಡಲಾಗುತ್ತಿದೆ’ ಎಂದು ಹೇಳಿದರು.

‘ಹೋದ ವರ್ಷ 545 ಮೆಟ್ರಿಕ್‌ ಪೂರ್ವ ವಿದ್ಯಾರ್ಥಿಗಳಿಗೆ ₹10.92 ಲಕ್ಷ ಮಂಜೂರು ಮಾಡಲಾಗಿದೆ. ಮೆಟ್ರಿಕ್ ನಂತರದ 9 ವಿದ್ಯಾರ್ಥಿಗಳಿಗೆ ₹38 ಸಾವಿರ ವಿದ್ಯಾರ್ಥಿ ವೇತನ ನೀಡಲಾಗಿದೆ. ಈ ಕುರಿತು ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸಲು ₹45 ವ್ಯಯಿಸಲಾಗಿದೆ’ ಎಂದು ಹೇಳಿದರು.

ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾ ಣಾಧಿಕಾರಿ ಆರ್.ಬಿ.ಹೊಸಮನಿ, ನಗರಾ ಭಿವೃದ್ಧಿ ಕೋಶದ ಯೋಜನಾಧಿಕಾರಿ ಎಸ್.ಎನ್.ರುದ್ರೇಶ್, ತಾಲ್ಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು, ಅಲೆಮಾರಿ ಜನಾಂಗದ ಮುಖಂಡರಾದ ವಿಠ್ಠಲ ಗಣಾಚಾರಿ, ಹನುಮಂತ ಬಾಗಲೆ, ಸಹದೇವ ಗಣಾಚಾರಿ, ಹರೀಶ್ ಪೂಜಾರ, ಅಶೋಕ ಗೋವಿ, ರಾಮಚಂದ್ರ ಶಿಂಧೆ, ಹುಸನಪ್ಪ ಶಿಂಧೆ, ಶಂಕರ ಪಾಚಂಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT