ಲಕ್ಷ್ಮೇಶ್ವರ: ಕಳೆದ ಎರಡು ವರ್ಷಗಳಿಂದ ನೂತನ ಗ್ರಾಮ ಪಂಚಾಯಿತಿ ಯೋಜನೆ ಅನುದಾನದಲ್ಲಿ ಜಿಲ್ಲಾ ಪಂಚಾಯಿತಿ ಇಲಾಖೆ ವತಿಯಿಂದ ನಿರ್ಮಿಸುತ್ತಿರುವ ತಾಲ್ಲೂಕಿನ ಮಾಡಳ್ಳಿ ಗ್ರಾಮದ ನೂತನ ಗ್ರಾಮ ಪಂಚಾಯಿತಿ ಕಟ್ಟಡ ಪೂರ್ಣಗೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಕಟ್ಟದ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಇದೀಗ ಕುಡುಕರ ಅಡ್ಡೆಯಾಗಿ ಮಾರ್ಪಟ್ಟಿದೆ. ಗ್ರಾಮದಲ್ಲಿ ಹೊಸ ಗ್ರಾಮ ಪಂಚಾಯಿತಿ ಕಟ್ಟಡ ನಿರ್ಮಿಸಿದರೇ ಗ್ರಾಮದ ಅಭಿವೃದ್ಧಿ ಆಗುತ್ತದೆ ಎಂದು ಕನಸು ಕಂಡಿದ್ದ ಗ್ರಾಮಸ್ಥರ ಕನಸು ಈಡೇರದಂತಾಗಿದೆ. ಆದಷ್ಟೂ ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಗ್ರಾಮಸ್ಥರು ಆಗ್ರಹಿಸಿದ್ದಾರೆ.

‘ಹೊಸ ಪಂಚಾಯಿತಿ ಕಟ್ಟಡ ಅರ್ಧಕ್ಕೆ ನಿಂತಿದೆ. ಮತ್ತೆ ಕಾಮಗಾರಿ ಪ್ರಾರಂಭಿಸಲು ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ₹20 ಲಕ್ಷ ಕ್ರಿಯಾಯೋಜನೆ ಸಿದ್ಧ ಪಡಿಸಲಾಗಿದೆ. ಪ್ರಕ್ರಿಯೆ ಮುಗಿದ ತಕ್ಷಣ ಟೆಂಡರ್ ಕರೆದು ಕಾಮಗಾರಿ ಆರಂಭಿಸಲಾಗುವುದು’ ಎಂದು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.