ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಳೆ ತಪ್ಪಿಸಲು ಕಾಯಕ ಬಂಧುಗಳ ಸಹಕಾರ ಅಗತ್ಯ

ಜಿಲ್ಲಾ ಮಾಹಿತಿ ಶಿಕ್ಷಣ ಮತ್ತು ಸಂವಹನ ಸಂಯೋಜಕ ವಿ.ಎಸ್. ಸಜ್ಜನ ಹೇಳಿಕೆ
Published 27 ಮಾರ್ಚ್ 2024, 14:13 IST
Last Updated 27 ಮಾರ್ಚ್ 2024, 14:13 IST
ಅಕ್ಷರ ಗಾತ್ರ

ರೋಣ: ಗ್ರಾಮೀಣ ಭಾಗದಲ್ಲಿ ಬೇಸಿಗೆ ಕಾಲದಲ್ಲಿ ಕೆಲಸವಿಲ್ಲದೇ ಗುಳೆ ಹೋಗುತ್ತಾರೆ. ಅದನ್ನು ತಪ್ಪಿಸಲು ನಿಮ್ಮೆಲ್ಲರ ಸಹಕಾರ ಬಹಳ ಮುಖ್ಯ. ಪ್ರತಿ ಮನೆಗೆ ಹೋಗಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಏಪ್ರಿಲ್ 1ರಿಂದ ಸಮುದಾಯ ಕಾಮಗಾರಿ ಪ್ರಾರಂಭವಾಗುತ್ತದೆ ಎಂದು ಜಿಲ್ಲಾ ಮಾಹಿತಿ ಶಿಕ್ಷಣ ಮತ್ತು ಸಂವಹನ ಸಂಯೋಜಕ ವಿ.ಎಸ್. ಸಜ್ಜನ ಹೇಳಿದರು. 

ತಾಲ್ಲೂಕಿನ ಸವಡಿ ಗ್ರಾಮ ಪಂಚಾಯ್ತಿಯಲ್ಲಿ ‘ವಲಸೆ ಯಾಕ್ರೀ ನಿಮ್ಮೂರಲ್ಲೇ ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ’ ಅಭಿಯಾನದಡಿ ನಡೆದ ಕಾಯಕ ಬಂಧುಗಳು, ಸ್ವಸಹಾಯ ಸಂಘಗಳ ಸದಸ್ಯರು ಮತ್ತು ಕೂಲಿಕಾರರ ಸಭೆಯಲ್ಲಿ ಅವರು ಮಾತನಾಡಿದರು.

ಗ್ರಾಮದಲ್ಲಿ ಸಮುದಾಯ ಕಾಮಗಾರಿ ಪ್ರಾರಂಭಿಸಲು ತಯಾರಿ ಮಾಡಿಕೊಳ್ಳಲಾಗಿದೆ. ಈಗಾಗಲೇ ಎಲ್ಲಾ ಗ್ರಾಮ ಪಂಚಾಯ್ತಿ ಅಧಿಕಾರಿಗಳಿಗೆ ಗದಗ ಜಿಲ್ಲಾ ಪಂಚಾಯ್ತಿ ಸಿಇಒ ಅವರು ತಿಳಿಸಿದ್ದಾರೆ. ಪ್ರತಿ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಕೆಲಸ ಪ್ರಾರಂಭವಾಗುತ್ತದೆ ಎಂದರು.

ಕಾಯಕ ಬಂಧುಗಳಾದ ತಾವೆಲ್ಲರೂ ಕೂಲಿಕಾರರ ಆರ್ಥಿಕ ಸಬಲತೆಗಾಗಿ ದುಡಿಯಬೇಕು. ಬಂಧು ಅಂದರೆ ಜನರಿಗೆ ಹತ್ತಿರ ಇದ್ದವರು ಅಂತಾ ಅರ್ಥ. ಹಾಗಾಗಿ ದುಡಿಯುವ ವರ್ಗಕ್ಕೆ ಹತ್ತಿರ ಇರುವ ತಮಗೆ ಕಾಯಕ ಬಂಧುಗಳು ಎನ್ನಲಾಗುತ್ತದೆ. ಕೆಲಸದ ಸ್ಥಳದಲ್ಲಿ ನೀರು, ನೆರಳು ಸೇರಿದಂತೆ ಮಕ್ಕಳಿಗಾಗಿಯೇ ಗ್ರಾಮದಲ್ಲಿ ಕೂಸಿನ ಮನೆ ಸಹ ತೆರಯಲಾಗಿದ್ದು ಪಾಲಕರು ಮಕ್ಕಳನ್ನು ಅಲ್ಲಿ ಬಿಟ್ಟು ಹೋಗಬೇಕು ಅದನ್ನು ನೀವು ಜನರಿಗೆ ತಿಳಿಸಬೇಕು ಎಂದರು.

ಮುಖ್ಯವಾಗಿ ಕೆಲಸಕ್ಕೆ ಬಂದವರಿಗೆ ಅಳತೆಗೆ ತಕ್ಕ ಹಾಗೆ ಕಡೆಯುವುದು ಕಡ್ಡಾಯ, ಒಬ್ಬರಿಗೆ ಒಂದು ಅಳತೆ ಮತ್ತೊಬ್ಬರಿಗೆ ಒಂದು ಅಳತೆ ಹೀಗೆ ತಾರತಮ್ಯ ಮಾಡದ ಹಾಗೆ ಕೆಲಸ ಮಾಡುವುದು ತಮ್ಮ ಕರ್ತವ್ಯವಾಗಿದ್ದು, ಈ ನಿಯಮ ಪಾಲಿಸಬೇಕು ಎಂದು ಮನವಿ ಮಾಡಿದರು.

ಈ ಬಾರಿ ಗ್ರಾಮ ಪಂಚಾಯ್ತಿಯಿಂದ ನೋಂದಾಯಿಸಲ್ಪಟ್ಟ ಕುಟುಂಬಗಳಲ್ಲಿ ನರೇಗಾ ಯೋಜನೆಯಡಿ ಸಕ್ರಿಯವಲ್ಲದೆ ಇರುವವರನ್ನು ಗುರುತಿಸಿ ಪಾಲ್ಗೊಳ್ಳುವಂತೆ ಮಾಡಲು ಮನೆ ಮನೆಗೆ ತೆರಳಿ ಯೋಜನೆಯಡಿ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವಂತೆ ತಿಳಿಸಿದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಬಸವರಾಜ ಶೃಂಗೇರಿ, ತಾಲ್ಲೂಕು ಮಾಹಿತಿ ಶಿಕ್ಷಣ ಮತ್ತು ಸಂವಹನ ಸಂಯೋಜಕ ಮಂಜುನಾಥ , ಬಿ.ಎಫ್.ಟಿ ಈರಣ್ಣ ಬೆಲೇರಿ, ಜಿಕೆಎಂ ಚಾಂದಬಿ ಕರ್ನಾಚಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT