ನರಗುಂದ: ‘ಯುವ ಸಮುದಾಯ ದುಶ್ಚಟಗಳಿಗೆ ಬಲಿಯಾಗದಂತೆ ಅರಿವು ಮೂಡಿಸುವುದು ಬಹಳ ಮುಖ್ಯವಾಗಿದೆ’ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಕೆ. ಇನಾಮದಾರ ಹೇಳಿದರು.

ತಾಲ್ಲೂಕಿನ ಕೊಣ್ಣೂರು ಗ್ರಾಮದ ಕೆಇಎಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ, ಆರೋಗ್ಯ ಇಲಾಖೆ, ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಮಂಗಳವಾರ ನಡೆದ ಮಾದಕ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಲಕಲ್ ಲಿಂ. ಮಹಾಂತ ಸ್ವಾಮೀಜಿ 1974ರಲ್ಲಿ ‘ಮಹಾಂತ ಜೋಳಿಗೆ, ದುಷ್ಚಟಗಳ ಭಿಕ್ಷೆ’ ಎಂಬ ವಾಕ್ಯದೊಂದಿಗೆ ಆಂದೋಲನ ಆರಂಭಿಸಿದ ಅಂಗವಾಗಿ ಅವರ ಜನ್ಮದಿನವನ್ನು ರಾಜ್ಯ ಸರ್ಕಾರ ವ್ಯಸನ ಮುಕ್ತ ದಿನಾಚರಣೆ ಎಂದು ಆಚರಿಸಲಾಗುತ್ತಿದೆ.

ಆರೋಗ್ಯ ಶಿಕ್ಷಣ ಅಧಿಕಾರಿ ಎಸ್.ಆರ್. ದಳವಾಯಿ ಮಾತನಾಡಿ, ‘ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಉತ್ತಮ ಜೀವನ ರೂಪಿಸಿಕೊಳ್ಳಬೇಕು’ ಎಂದರು.

ಸಂಜೀವಿನಿ ಯೋಜನೆಯ ತಾಲ್ಲೂಕು ವ್ಯವಸ್ಥಾಪಕ ಮೋಹನಕೃಷ್ಣ ಪ್ರಾಸ್ತಾವಿಕ ಮಾತನಾಡಿದರು. ಪ್ರಾಚಾರ್ಯ ಕೆ.ಎಂ. ಮಾಕನ್ನವರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲ್ಲೂಕು ಆರೋಗ್ಯ ನಿರೀಕ್ಷಣಾಧಿಕಾರಿ ಎಸ್.ಆರ್. ಕುಂಬಾರ, ಸಂಜೀವಿನಿ ಯೋಜನೆಯ ಸಮೂಹ ಮೇಲ್ವಿಚಾರಕ ಲಕ್ಷ್ಮಣ ಪೂಜಾರ, ಸಿದ್ಧಪ್ಪ ದೇಸಾಯಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.