ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವೇಕ ಸತ್ಸಂಗ, ಸಂಕ್ರಾಂತಿ ಸಡಗರ

ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ
Last Updated 13 ಜನವರಿ 2021, 2:33 IST
ಅಕ್ಷರ ಗಾತ್ರ

ಗದಗ: ರಾಷ್ಟ್ರೀಯ ಯುವ ದಿನದ ಅಂಗವಾಗಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಸಾಬರಮತಿ ಆಶ್ರಮದ ವತಿಯಿಂದ ವಿವೇಕ ಸತ್ಸಂಗ ಕಾರ್ಯಕ್ರಮ ಹಾಗೂ ಮನೋಚೇತನ ಆಪ್ತ ಸಮಾಲೋಚನಾ ಕೇಂದ್ರದ ಉದ್ಘಾಟನೆ ನಡೆಯಿತು.

ಕರ್ನಾಟಕ ಪಂಚಾಯತ್ ಪರಿಷತ್‍ನ ಉಪಾಧ್ಯಕ್ಷ ಡಿ.ಆರ್.ಪಾಟೀಲ, ‘ಗಾಂಧೀಜಿ ಮತ್ತು ವಿವೇಕಾನಂದರು ಮಾನವ ಜೀವನದ ಅಭಿವೃದ್ಧಿ ಅಲ್ಲದೇ ದೇಶದ ಅಭಿವೃದ್ಧಿ ದೃಷ್ಟಿಕೋನದಲ್ಲಿಯೂ ಸ್ಫೂರ್ತಿಯ ಸೆಲೆಯಾಗಿದ್ದಾರೆ’ ಎಂದು ಹೇಳಿದರು.

ವಿದ್ಯಾಭಾರತಿಯ ದಕ್ಷಿಣ ಮಧ್ಯ ಕ್ಷೇತ್ರದ ಸಂಘಟನಾ ಕಾರ್ಯದರ್ಶಿ ಜಗದೀಶ ಜಿ.ಆರ್, ವಿಶ್ವವಿದ್ಯಾಲಯದ ವಿತ್ತಾಧಿಕಾರಿ ಪ್ರಶಾಂತ ಜೆ.ಸಿ. ಮಾತನಾಡಿದರು.

ಈ ಕಾರ್ಯಕ್ರಮದ ಪೂರಕವಾಗಿ ವಿಶ್ವವಿದ್ಯಾಲಯದ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದ ವತಿಯಿಂದ ಪುಸ್ತಕ ಪ್ರದರ್ಶನ ಮತ್ತು ಮಾರಾಟ ಹಮ್ಮಿಕೊಳ್ಳಲಾಗಿತ್ತು. ಯೋಗಕ್ಷೇಮ ಯೋಗ ಕೇಂದ್ರದ ಯೋಗ ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.

ಸಮಾರಂಭದ ಬಳಿಕ ವಿಶ್ವವಿದ್ಯಾಲಯದ ಮಾದರಿ ಸಸ್ಯ ಶಿಶುಪಾಲನಾ ಕೇಂದ್ರದಲ್ಲಿ ಏರ್ಪಡಿಸಿದ್ದ ಸಂಕ್ರಾಂತಿ ಸಂಭ್ರಮದಲ್ಲಿ ಕುಲಪತಿ ಪ್ರೊ. ವಿಷ್ಣುಕಾಂತ ಎಸ್‌.ಚಟಪಲ್ಲಿ ಜನರಿಗೆ ಶುಭಾಶಯ ಕೋರಿದರು. ಕುಲಸಚಿವ ಬಸವರಾಜ ಎಲ್. ಲಕ್ಕಣ್ಣವರ ಸ್ವಾಗತಿಸಿದರು. ಸಾಬರಮತಿ ಆಶ್ರಮದ ಸಂಚಾಲಕರಾದ ಪ್ರಕಾಶ ಮಾಚೇನಹಳ್ಳಿ ವಂದಿಸಿದರು. ಉಪನ್ಯಾಸಕ ಸೋಮಶೇಖರ ನಿರೂಪಿಸಿದರು. ಡಾ. ಗೀತಾ ಬಂಗಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT