ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56,431 ಹುದ್ದೆಗಳನ್ನು ತುಂಬುವುದಾಗಿ ಇತ್ತೀಚೆಗೆ ಘೋಷಣೆ ಮಾಡಿ ಅದರಲ್ಲಿ ಶಾಲಾ ಶಿಕ್ಷಣ ಇಲಾಖೆಯಲ್ಲಿ 15,000 ಶಿಕ್ಷಕರ ಹುದ್ದೆಗಳನ್ನು, ಉನ್ನತ ಶಿಕ್ಷಣದಲ್ಲಿ 2000 ಬೋಧಕ ಹುದ್ದೆಗಳನ್ನು ಹಾಗೂ ವಿಶ್ವವಿದ್ಯಾಲಗಳಲ್ಲಿ 1000 ಸಾವಿರ ಹುದ್ದೆಗಳನ್ನು ತುಂಬಲು ಬಜೆಟ್ನಲ್ಲಿ ಪ್ರಸ್ತಾಪಿಸಿದ್ದಾರೆ.

ಅದರ ಜತೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳಲ್ಲಿ 2,500 ಹುದ್ದೆಗಳು, ಅರಣ್ಯ ಮತ್ತು ಪರಿಸರ ಇಲಾಖೆಯಲ್ಲಿ 358, ಗೃಹ ಇಲಾಖೆಯಲ್ಲಿ 8,000 ಸೇರಿದಂತೆ ಒಟ್ಟು 28,858 ಹುದ್ದೆಗಳನ್ನು ಮಾತ್ರ ತುಂಬಿಕೊಳ್ಳಲು ಬಜೆಟ್ ಭಾಷಣದಲ್ಲಿ ತಿಳಿಸಿದ್ದಾರೆ. ಆದರೆ, ಉಳಿದ 27,573 ಹುದ್ದೆಗಳ ನೇಮಕಾತಿ ಬಗ್ಗೆ ಯಾವ ಪ್ರಸ್ತಾಪ ಮಾಡದೇ ಇರುವುದು ಖಂಡನೀಯ.

ಮುಖ್ಯಮಂತ್ರಿ ಮಂಡಿಸಿರುವ 2026-27ನೇ ಸಾಲಿನ ಬಜೆಟ್ ₹4,48,004 ಕೋಟಿಯ ಬೃಹತ್ ಆಕಾರ ಹೊಂದಿದ್ದು, ಇದರಲ್ಲಿ ₹1.32 ಲಕ್ಷ ಕೋಟಿ ಸಾಲ ಪಡೆಯುವುದಾಗಿ ತಿಳಿಸಲಾಗಿದೆ. ಒಟ್ಟಾರೆ ಈ ಬಜೆಟ್ ಜನರ ಮೇಲೆ ಸಾಲ ಹೊರಿಸುವ ಮತ್ತು ಹೆಚ್ಚು ತೆರಿಗೆ ವಸೂಲಿ ಮಾಡುವ ಅಲ್ಲದೇ ಅಭಿವೃದ್ಧಿಗೆ ಮಾರಕವಾಗಿರುವ ಬಜೆಟ್ ಆಗಿದೆ.

ಎಸ್.ವಿ. ಸಂಕನೂರ, ವಿಧಾನ ಪರಿಷತ್ ಸದಸ್ಯ

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260307-23-892177615

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.