ಗದಗ: ಯುವನಿಧಿ ಯೋಜನೆಗೆ ಈಗಾಗಲೇ ನೋಂದಾಯಿಸಿಕೊಂಡು ಸೌಲಭ್ಯ ಪಡೆಯುತ್ತಿರುವ ಅಭ್ಯರ್ಥಿಗಳು ವರ್ಷದಲ್ಲಿ 4 ಬಾರಿ ಸ್ವಯಂ ಘೋಷಣೆ ನೀಡಬೇಕಿದ್ದು, ಅದರಂತೆ ಈ ಬಾರಿ ಮೇ 25ರೊಳಗೆ ಸ್ವಯಂ ಘೋಷಣೆಯ ದೃಢೀಕರಣ ನೀಡುವಂತೆ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಗದಗ ತಾಲ್ಲೂಕು ಘಟಕದ ಅಧ್ಯಕ್ಷ ಅಶೋಕ ಮಂದಾಲಿ ತಿಳಿಸಿದ್ದಾರೆ.

2025ರ ಮಾರ್ಚ್, ಏಪ್ರಿಲ್ ಹಾಗೂ ಮೇ ತ್ರೈಮಾಸಿಕ ಸ್ವಯಂ ದೃಢೀಕರಣ ಘೋಷಣೆಯನ್ನು ಇದೇ 25ರೊಳಗೆ ನೀಡಬೇಕು. ಯುವನಿಧಿ ಯೋಜನೆಯ ಫಲಾನುಭವಿಗಳು ನಿಗದಿತ ದಿನಾಂಕದೊಳಗೆ ಸೇವಾ ಸಿಂಧು ಪೋರ್ಟಲ್ ಲಾಗಿನ್ನಲ್ಲಿ ಅರ್ಜಿ ಸ್ಥಿತಿಯನ್ನು ಪರಿಶೀಲಿಸಿ, ದಾಖಲೆ ಪರಿಶೀಲನೆ ಬಾಕಿ ಉಳಿದಿರುವ ಅಭ್ಯರ್ಥಿಗಳು ಎಲ್ಲ ಮೂಲ ದಾಖಲೆಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 215 ಇಲ್ಲಿಗೆ ಖುದ್ದಾಗಿ ಸಂಪರ್ಕಿಸಿ ತಮ್ಮ ದಾಖಲೆಗಳನ್ನು ದೃಢೀಕರಿಸಿಕೊಳ್ಳಲು ತಿಳಿಸಿದ್ದಾರೆ.

ಮಾಹಿತಿಗೆ 08372-220609 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.