ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಇದ್ದೂ ಇಲ್ಲದಂತಾದ ಶೌಚಾಲಯ: ವಿದ್ಯಾರ್ಥಿನಿಯರ ಪರದಾಟ

Published : 20 ಡಿಸೆಂಬರ್ 2017, 8:27 IST
ಫಾಲೋ ಮಾಡಿ
Comments

ಲಕ್ಷ್ಮೇಶ್ವರ: ಮುಖ್ಯಮಂತ್ರಿ ಸಿದ್ಧರಾಮಯ್ಯ ಡಿ. 25ರಂದು ಲಕ್ಷ್ಮೇಶ್ವರಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಇಲ್ಲಿನ ಎ.ಪಿ.ಎಂ.ಸಿ. ಭವನದಲ್ಲಿ ಶಾಸಕ ರಾಮಕೃಷ್ಣ ದೊಡ್ಡಮನಿ ಅಧಿಕಾರಿಗಳ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ಮುಖ್ಯಮಂತ್ರಿ ಸಿದ್ಧರಾಮಯ್ಯ ಡಿ. 25ರಂದು ಬೆಳಿಗ್ಗೆ 11ಕ್ಕೆ ಹೆಲಿಕಾಪ್ಟರ್‌ ಮೂಲಕ ಲಕ್ಷ್ಮೇಶ್ವರಕ್ಕೆ ಭೇಟಿ ನೀಡಲಿದ್ದು, ಪುರಸಭೆ ಉಮಾವಿದ್ಯಾಲಯ ಹತ್ತಿರ ನಿರ್ಮಿಸಿರುವ ಕನಕ ಭವನ, ದೂದಪೀರಾಂ ದರ್ಗಾದ ಶಾದಿಮಹಲ್‌ ಉದ್ಘಾಟಿಸುವರು.

ನಂತರ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ, ಪುರಸಭೆ ಉಮಾ ವಿದ್ಯಾಲಯದ ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವರು. ಈ ಸಂದರ್ಭದಲ್ಲಿ ಒಟ್ಟು ₹ 446 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿ.ಎಂ ಚಾಲನೆ ನೀಡುವರು’ ಎಂದು ಮಾಹಿತಿ ನೀಡಿದರು. ‘ಸಿ.ಎಂ ಭೇಟಿ ವೇಳೆ ಯಾವುದೇ ಅಡೆತಡೆ ಆಗದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು’ ಎಂದು ಅವರು ಸೂಚಿಸಿದರು.

ಸಭೆಯಲ್ಲಿ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎಸ್‌. ಗಡ್ಡದೇವರಮಠ, ಎ.ಪಿ.ಎಂ.ಸಿ. ಅಧ್ಯಕ್ಷ ಎಸ್‌.ಪಿ. ಪಾಟೀಲ ಮಾತನಾಡಿದರು. ಶಿವಣ್ಣ ನೆಲವಗಿ, ಜಿಲ್ಲಾ ಪಂಚಾಯ್ತಿ ಯೋಜನಾಧಿಕಾರಿ ಟಿ.ದಿನೇಶ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಆರ್‌.ವೈ. ಗುರಿಕಾರ, ತಹಶೀಲ್ದಾರ್ ಎ.ಡಿ. ಅಮರಾವದಗಿ, ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT