ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ನೆಲೆ ಕಳೆದುಕೊಂಡಿದೆ: ಬಂಡಿ

Last Updated 6 ಡಿಸೆಂಬರ್ 2022, 5:57 IST
ಅಕ್ಷರ ಗಾತ್ರ

ಗಜೇಂದ್ರಗಡ: ‘ದೇಶದ ಜನತೆ ಈಗಾಗಲೇ ಕಾಂಗ್ರೆಸ್ ಪಕ್ಷವನ್ನು ತಿರಸ್ಕರಿಸಿದ್ದು, ಕಾಂಗ್ರೆಸ್‌ಗೆ ನೆಲೆ ಇಲ್ಲದಂತಾಗಿದೆ. ಹೀಗಾಗಿ ರಾಜ್ಯ ಸೇರಿದಂತೆ ಇನ್ನಿತರ ರಾಜ್ಯಗಳಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ' ಎಂದು ಶಾಸಕ ಕಳಕಪ್ಪ ಬಂಡಿ ಹೇಳಿದರು.

ಪಟ್ಟಣದ ಶಾಸಕರ ಜನಸಂಪರ್ಕ ಕಾರ್ಯಾಲಯದಲ್ಲಿ ಭಾನುವಾರ ಸಂಜೆ ರೋಣ ಪಟ್ಟಣದ ಕಾಂಗ್ರೆಸ್ ಯುವ ಕಾರ್ಯಕರ್ತರನ್ನು ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡು ಅವರು ಮಾತನಾಡಿದರು.

‘ಬಲಿಷ್ಠ ಭಾರತ ನಿರ್ಮಾಣಕ್ಕೆ ಪಣತೊಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಿಶ್ವಾಸವಿಟ್ಟಿರುವ ದೇಶದ ಜನತೆ ಬಿಜೆಪಿ ಬೆಂಬಲಿಸುತ್ತಿದ್ದಾರೆ. ರಾಜ್ಯದಲ್ಲಿಯೂ ಸಹ ಬಿಜೆಪಿ ಪರ ಜನತೆಯ ಒಲವಿದ್ದು, ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ಪಕ್ಷಕ್ಕೆ ಸೇರ್ಪಡೆಯಾದ ಎಲ್ಲರೂ ಪಕ್ಷದಲ್ಲಿ ಗಟ್ಟಿಯಾಗಿ ನೆಲೆಯೂರಿ ಪಕ್ಷ ಸಂಘಟನೆ ಜೊತೆಗೆ ಮತ್ತಷ್ಟು ಜನರನ್ನು ಬಿಜೆಪಿಗೆ ಕರೆತನ್ನಿ’ ಎಂದು ಪಕ್ಷಕ್ಕೆ ಸೇರ್ಪಡೆಯಾದ ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.

ಬಿಜೆಪಿ ರೋಣ ಮಂಡಲದ ಪ್ರಧಾನ ಕಾರ್ಯದರ್ಶಿ ಉಮೇಶ ಮಲ್ಲಾಪೂರ ಮಾತನಾಡಿ, 'ಶಾಸಕ ಕಳಕಪ್ಪ ಬಂಡಿ ಅವರು ತಮ್ಮ ಅಧಿಕಾರದ ಅವಧಿಯಲ್ಲಿ ಮತಕ್ಷೇತ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಜನತೆ ಶಾಸಕ ಕಳಕಪ್ಪ ಬಂಡಿ ಅವರನ್ನು ಮತ್ತೊಮ್ಮೆ ಗೆಲ್ಲಿಸಲು ಉತ್ಸುಕರಾಗಿದ್ದಾರೆ' ಎಂದರು.

ಬಸವರಾಜ ಹಲಗಿ, ಸಲೀಂ ಇದ್ಲಿ, ರಾಜಣ್ಣ ಇಟಗಿ, ರವಿ ಜೊಗಣ್ಣವರ, ಬಾಲರಾಜ ಹಲಗಿ, ಹುಸೇನ ಕುರಹಟ್ಟಿ, ಸುರೇಶ ಮಾದರ, ಮಂಜು ಗಾಲವಾಡ, ಪ್ರಜ್ವಲ ಚಲವಾದಿ, ಮಾಂತೇಶ ಜೊಗಣ್ಣವರ, ಗಣೇಶ ನರೇಗಲ್, ಸಲೀಂ ಜಾಲವಾರ, ಮಂಜು ಉಪನಾಳ, ಶಮೀರ್ ನಧಾಪ್, ಯಮನಪ್ಪ ಮಾದರ, ಶಮೀರ್ ಮುಲ್ಲಾ, ಬಸು ಮಾದರ, ಮುನ್ನಾ ಕುರಹಟ್ಟಿ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದರು.

ಮುದಿಯಪ್ಪ ಕರಡಿ, ಬಾಳು ಗೌಡರ, ಸೂಗುರೇಶ ಚೋಳಿನ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT