ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವೈಯಕ್ತಿಕ ಶೌಚಾಲಯ ನಿರ್ಮಿಸಿಕೊಳ್ಳಿ’

Last Updated 17 ಜುಲೈ 2017, 6:48 IST
ಅಕ್ಷರ ಗಾತ್ರ

ಮುಂಡರಗಿ: ಸರ್ಕಾರ ನೀಡುವ ಸಹಾಯ ಧನದಿಂದ ಮನೆಗಳಲ್ಲಿ ವೈಯಕ್ತಿಕ ಶೌಚಾ ಲಯ ನಿರ್ಮಿಸಿಕೊಂಡಿರುವ ಫಲಾನು ಭವಿಗಳು ಅವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಶಾಸಕ ರಾಮ ಕೃಷ್ಣ ದೊಡ್ಡಮನಿ ಸಲಹೆ ನೀಡಿದರು.

ತಾಲ್ಲೂಕು ಪಂಚಾಯಿತಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗಳು ಶನಿವಾರ ಪಟ್ಟಣದ ಎ.ಪಿ.ಎಂ.ಸಿ ಆವರಣದಲ್ಲಿ ಏರ್ಪಡಿಸಿದ್ದ ಸ್ವಚ್ಛ ಭಾರತ ಅಭಿಯಾನ ಜನ ಜಾಗೃತಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಭಾಗಗಳಲ್ಲಿ ಇನ್ನೂ ಹಲವಾರು ಕುಟುಂಬಗಳು ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಿಕೊಳ್ಳ ಬೇಕಿದೆ. ಶೌಚಾಲಯ ನಿರ್ಮಿಸಿಕೊಳ್ಳಲು ಪಟ್ಟಣದ ಹಾಗೂ ಗ್ರಾಮೀಣ ಭಾಗದಲ್ಲಿನ ಜನರಿಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಆಗಷ್ಟ್ 15ರ ಒಳಗೆ ಗದಗ ಜಿಲ್ಲೆ ಯನ್ನು ಸಂಪೂರ್ಣ ಬಯಲು ಶೌಚ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲ ಶಿಕ್ಷಕರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸ ಬೇಕು. ಸ್ವಚ್ಛತೆ ಕುರಿತಂತೆ ಎಲ್ಲರೂ ಎಚ್ಚೆತ್ತುಕೊಂಡಾಗ ಮಾತ್ರ ಸುಂದರ ಹಾಗೂ ಸ್ವಚ್ಛ ಭಾರತ ನಿರ್ಮಾಣ ಮಾಡಲು ಸಾಧ್ಯ. ಆದ್ದರಿಂದ ಶಿಕ್ಷಕರು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತ ರಾಗಬೇಕು ಎಂದು ತಿಳಿಸಿದರು.

ಸಾನಿಧ್ಯ ವಹಿಸಿದ್ದ ಅನ್ನದಾನೀಶ್ವರ ಸ್ವಾಮೀಜಿ ಆಶೀರ್ವಚನ ನೀಡಿ, ಸರ್ಕಾರದ ವಿವಿಧ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಶಿಕ್ಷಕರ ಪಾತ್ರ ಬಹು ಮುಖ್ಯ. ಬಯಲು ಶೌಚದಿಂದ ಪರಿಸರ ಮಲೀನಗೊಳ್ಳುವುದರ ಜೊತೆಗೆ ನಮ್ಮ ಸುತ್ತಮುತ್ತಲಿನ ವಾತಾವರಣವು ಕಲುಷಿತಗೊಳ್ಳುತ್ತದೆ. ಇದರಿಂದ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಾರೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯೆ ಶೋಭಾ ಮೇಟಿ ಮಾತನಾಡಿ, ಮಕ್ಕಳಿಗೆ ಮಾರ್ಗ ದರ್ಶನ ನೀಡುವಂತ ಶಿಕ್ಷಕರು ಜನರಿಗೂ ಶೌಚಾಲಯ ನಿರ್ಮಿಸಿಕೊಳ್ಳುವ ಕುರಿತು ತಿಳುವಳಿಕೆ ನೀಡಬೇಕು. ಪ್ರತಿಯೊಂದು ಮಗುವು ತಮ್ಮ ಮನೆಯಲ್ಲಿ ಶೌಚಾಲಯ ನಿರ್ಮಿಸಿಕೊಳ್ಳುವ ಕುರಿತಂತೆ ಪಾಲಕರ ಮನ ಒಲಿಸಬೇಕು ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಸದಸ್ಯ ರುದ್ರಗೌಡ ಪಾಟೀಲ ಮಾತನಾಡಿದರು. ತಾ.ಪಂ.ಸದಸ್ಯ ವೆಂಕಪ್ಪ ಬಳ್ಳಾರಿ, ಪುರ ಸಭೆ ಸದಸ್ಯ ಸೋಮನಗೌಡ ಗೌಡ್ರ, ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಜಿ.ಧರ್ಮಾಧಿಕಾರಿ, ಬಿಒ ಎಂ.ಎ.ರಡ್ಡೇರ, ಸಿ.ಆರ್‌.ಮಂಡರಗಿ, ಜಿ.ಪಂ. ಎಇಇ ಎಂ.ಡಿ.ತೋಗಣಸಿ, ಪಿಡಬ್ಲುಡಿ ಎಇಇ ನರೇಂದ್ರ, ಸಿಡಿಪಿಓ ಎಸ್.ಎಸ್.ವಾರದ, ಬಸವರಾಜ ಅಂಗಡಿ, ಡಾ.ಬಿ.ಎಸ್. ಮೇಟಿ, ಎಪಿಎಂಸಿ ಕಾರ್ಯದರ್ಶಿ ಜಿ.ಎಸ್. ಬುರುಡಿ, ಗಂಗಾಧರ ಅಣ್ಣಿಗೇರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT