ಸೋಮವಾರ, ಏಪ್ರಿಲ್ 6, 2020
19 °C
ಶಾಸಕ ಎಚ್.ಹಾಲಪ್ಪ ಹರತಾಳು ಸೂಚನೆ

ಗಣಪತಿ ಜಾತ್ರೆ: ಉಕ್ಕಿನ ಮೇಲ್ಸೇತುವೆ ನಿರ್ಮಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಾಗರ: ಇಲ್ಲಿನ ಮಹಾಗಣಪತಿ ದೇವರ ರಥೋತ್ಸವದ ನಂತರ ರಥದಲ್ಲಿರುವ ಗಣಪತಿಯ ಉತ್ಸವ ಮೂರ್ತಿಯನ್ನು ಸಮೀಪದಿಂದ ದರ್ಶನ ಮಾಡಲು ಅವಕಾಶ ಕಲ್ಪಿಸುವ ಸಲುವಾಗಿ ಸ್ಟೀಲ್ ಓವರ್ ಬ್ರಿಡ್ಜ್ ನಿರ್ಮಾಣ ಮಾಡಲು ಟೆಂಡರ್ ಕರೆಯುವಂತೆ ಶಾಸಕ ಎಚ್. ಹಾಲಪ್ಪ ಹರತಾಳು ಅಧಿಕಾರಿಗಳಿಗೆ ಸೂಚಿಸಿದರು.

ಮಾರ್ಚ್ 28ರಿಂದ ನಡೆಯಲಿರುವ ಮಹಾಗಣಪತಿ ಜಾತ್ರೋತ್ಸವ ಅಂಗವಾಗಿ ಶನಿವಾರ ಅಧಿಕಾರಿಗಳೊಂದಿಗೆ ಏರ್ಪಡಿಸಿದ್ದ  ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ‘ಈ ಬಾರಿ ಗಣಪತಿ ಜಾತ್ರೆಯನ್ನು ಮಾರಿಕಾಂಬಾ ಜಾತ್ರೆ ಮಾದರಿಯಲ್ಲೇ ಎಲ್ಲರ ಸಲಹೆ ಪಡೆದು ಅರ್ಥಪೂರ್ಣವಾಗಿ ಆಚರಿಸಲಾಗುವುದು’ ಎಂದು ತಿಳಿಸಿದರು.

ಗಣಪತಿ ಜಾತ್ರೆಗೆ ಪ್ರತಿವರ್ಷ ಮುಜರಾಯಿ ಇಲಾಖೆಯಿಂದ ₹ 7 ಲಕ್ಷ ನೀಡಲಾಗುತ್ತಿದೆ. ಮಳಿಗೆ ಹರಾಜು ಹಾಗೂ ಧಾರ್ಮಿಕ ಕಾರ್ಯಕ್ರಮಗಳಿಂದ ಸುಮಾರು ₹ 25 ಲಕ್ಷ ಸಂಗ್ರಹವಾಗುತ್ತಿದೆ. ಈ ಬಾರಿ ಜಾತ್ರೆಗೆ ₹ 25 ಲಕ್ಷ ಅನುದಾನ ನೀಡುವಂತೆ ಮುಜರಾಯಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಗಣಪತಿ ಜಾತ್ರೆಯಲ್ಲಿ ಸುತ್ತಮುತ್ತಲಿನ ಪರಿಸರವನ್ನು ಚೊಕ್ಕಟವಾಗಿಡುವಂತೆ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳು ನಿಗಾ ವಹಿಸಬೇಕು. ಪ್ರತಿವರ್ಷದಂತೆ ಈ ವರ್ಷವೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದು ತಿಳಿಸಿದರು.

ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್, ನಗರಸಭೆ ಸದಸ್ಯ ಟಿ.ಡಿ. ಮೇಘರಾಜ್, ಪೌರಾಯುಕ್ತ ಎಸ್.ರಾಜು, ಮೆಸ್ಕಾಂ ಎಂಜಿನಿಯರ್‌ ಚಂದ್ರಶೇಖರ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು