ಶುಕ್ರವಾರ, ಅಕ್ಟೋಬರ್ 18, 2019
27 °C
ಕುದರಿಸಾಲವಾಡಗಿಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ

ಗ್ರಾಮದ ಸ್ವಚ್ಛತೆ, ಮೂಲಸೌಲಭ್ಯಕ್ಕೆ ಆದ್ಯತೆ

Published:
Updated:
Prajavani

ಬಸವನಬಾಗೇವಾಡಿ: ಸ್ವಚ್ಛತೆ, ನೈರ್ಮಲ್ಯ, ಮೂಲ ಸೌಲಭ್ಯ, ತ್ಯಾಜ್ಯ ನಿರ್ವಹಣೆ, ಕಂದಾಯ ವಸೂಲಿ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ 2018-19ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ತಾಲ್ಲೂಕಿನ ಕುದರಿಸಾಲವಾಡಗಿ ಗ್ರಾಮ ಪಂಚಾಯಿತಿ ಆಯ್ಕೆಯಾಗಿದೆ.

ಕುದರಿಸಾಲವಾಡಗಿ ಸೇರಿದಂತೆ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆ, ನೀರು ಸರಬರಾಜಿಗೆ ಆದ್ಯತೆ ನೀಡ
ಲಾಗಿದೆ. ಗ್ರಾಮ ಪಂಚಾ ಯಿತಿ ಅಧ್ಯಕ್ಷರು, ಸದಸ್ಯರು, ಗ್ರಾಮಸ್ಥರ ಸಹಕಾರ ದೊಂದಿಗೆ ಪಂಚಾಯಿತಿ ಸಿಬ್ಬಂದಿಯು ವಿವಿಧ ಇಲಾಖೆಗಳ ಸಹಯೋಗಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿ ಸುವ ಮೂಲಕ ಜಾಗೃತಿ ಮೂಡಿಸಿದ್ದಾರೆ.

ಗ್ರಾಮದ ಶಾಲೆಯ ವಿದ್ಯಾರ್ಥಿಗಳು ಜಾಥಾ ನಡೆಸುವ ಮೂಲಕ ಗ್ರಾಮದ ಸ್ವಚ್ಛತೆ, ವೈಯಕ್ತಿಕ ಶೌಚಾಲಯ ಹೊಂದುವುದು, ಉತ್ತಮ ಪರಿಸರ ನಿರ್ಮಾಣ ಮಾಡುವುದು, ನೀರನ್ನು ಮಿತವಾಗಿ ಬಳಸಿಕೊಳ್ಳುವುದು ಸೇರಿ ದಂತೆ ವಿವಿಧ ವಿಷಯಗಳ ಬಗ್ಗೆ ಗ್ರಾಮಸ್ಥರಲ್ಲಿ ಅರಿವು ಮೂಡಿಸಿದ್ದಾರೆ.
ಆರೋಗ್ಯ ಇಲಾಖೆ ಸಹಯೋಗದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋ ಜಿಸುವ ಮೂಲಕ ಆರೋಗ್ಯಯುತ ಗ್ರಾಮ ನಿರ್ಮಾಣದಲ್ಲಿ ಜನರ ಪಾತ್ರ ಕುರಿತು ಜಾಗೃತಿ ಮೂಡಿಸುವ ಕಾರ್ಯ ಮಾಡಲಾಗಿದೆ.

‘ಗ್ರಾಮ ಪಂಚಾಯಿತಿಯು ಪ್ರತಿ ಮನೆಗೆ ವೈಯಕ್ತಿಕ ಶೌಚಾಲಯ ಹೊಂದುವಂತೆ ಜಾಗೃತಿ ಮೂಡಿಸಿದರ ಫಲವಾಗಿ ಪ್ರತಿ ಮನೆಯಲ್ಲೂ ವೈಯಕ್ತಿಕ ಶೌಚಾಲಯ ನಿರ್ಮಾಣವಾಗಿವೆ. ಗ್ರಾಮದ ಚರಂಡಿ ಸ್ವಚ್ಛಗೊಳಿಸುವುದರ ಜೊತೆಗೆ ವಾರಕ್ಕೆ ಒಮ್ಮೆ ಬ್ಲಿಚಿಂಗ್ ಪೌಡರ್ ಸಿಂಪರಣೆ ಮಾಡಿ ಸ್ವಚ್ಛ ಗ್ರಾಮಕ್ಕೆ ಆದ್ಯತೆ ನೀಡಲಾಗಿದೆ’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ದೇವಮ್ಮ ಹಚಡದ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಬಿ.ಎಸ್.ಬಡಿಗೇರ ತಿಳಿಸಿದರು.

ಸರ್ಕಾರದ ಅನುದಾನವನ್ನು ಸಮಪರ್ಕವಾಗಿ ಬಳಕೆ ಮಾಡಿಕೊಳ್ಳುವ ಮೂಲಕ ವಿವಿಧ ಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಲಾಗಿದೆ. ಶೇ 80 ರಷ್ಟು ಕಂದಾಯ ವಸೂಲಿಯಾಗಿದೆ. ಶುದ್ಧ ಕುಡಿಯುವ ನೀರು ಸರಬರಾಜಿಗೆ ಆದ್ಯತೆ ನೀಡಲಾಗಿದೆ. ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ ಲಭಿಸಿರುವುದಕ್ಕೆ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.ದಿ

Post Comments (+)