ಗಾಂಧಿ ಪ್ರತಿಕೃತಿಗೆ ಗುಂಡು: ಕ್ರಮಕ್ಕೆ ಆಗ್ರಹ

7

ಗಾಂಧಿ ಪ್ರತಿಕೃತಿಗೆ ಗುಂಡು: ಕ್ರಮಕ್ಕೆ ಆಗ್ರಹ

Published:
Updated:
Prajavani

ಶಿವಮೊಗ್ಗ: ಮಹಾತ್ಮ ಗಾಂಧೀಜಿ ಪ್ರತಿಕೃತಿ ಮರುಸೃಷ್ಟಿಸಿ ಹತ್ಯೆ ಮಾಡಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಸದಸ್ಯರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿದ ಕಾಂಗ್ರೆಸ್‌ ಕಾರ್ಯಕರ್ತರು, ಗಾಂಧಿ ಪ್ರತಿಕೃತಿಗೆ ಗುಂಡಿಕ್ಕಿ, ಗೋಡ್ಸೆ ಪ್ರತಿಕೃತಿಗೆ ಮಾಲಾರ್ಪಣೆ ಮಾಡಿದವರ ವಿರುದ್ಧ ಘೋಷಣೆ ಕೂಗಿದರು.

 ಜ.30 ರಂದು ಹಿಂದೂ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ಪೂಜಾ ಶಕುನ್ ಪಾಂಡೆ ಹಾಗೂ ಸಹ ಕಾರ್ಯಕರ್ತರು ನಕಲಿ ಬಂದೂಕಿನಿಂದ ಗಾಂಧೀಜಿ ಪ್ರತಿಕೃತಿಗೆ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆಯನ್ನು ಮರುಸೃಷ್ಟಿಸಿದ್ದಾರೆ. ಹತ್ಯೆಗೈದ ಹಂತಕ ಗೂಡ್ಸೆ ಪ್ರತಿಕೃತಿಗೆ ಮಾಲಾರ್ಪಣೆ ಮಾಡಿ ವಿಕೃತಿ ಮೆರೆದಿದ್ದಾರೆ ಎಂದು ದೂರಿದರು.

ತಕ್ಷಣವೇ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ನೇತೃತ್ವ ವಹಿಸಿದ್ದರು. ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಮಾಜಿ ಶಾಸಕರಾದ ಕೆ.ಬಿ. ಪ್ರಸನ್ನಕುಮಾರ್, ಎಚ್.ಎಂ. ಚಂದ್ರಶೇಖರಪ್ಪ, ಪ್ರಮುಖರಾದ ಸತ್ಯನಾರಾಯಣ್, ಎಸ್‌.ಪಿ. ದಿನೇಶ್, ಇಸ್ಮಾಯಿಲ್ ಖಾನ್, ವಿಶ್ವನಾಥ್ ಕಾಶಿ, ಎನ್. ರಮೇಶ್, ವಿಜಯಲಕ್ಷ್ಮಿ ಸಿ. ಪಾಟೀಲ್, ಜಿ.ಪಲ್ಲವಿ, ರಂಗನಾಥ್, ಮಧುಸೂದನ್‌ ಇದ್ದರು.

ಬರಹ ಇಷ್ಟವಾಯಿತೆ?

 • 11

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !