ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಂತು ಹುಳು ನಿವಾರಣೆಗೆ ಮಾತ್ರೆ ಕೊಡಿ’

Last Updated 11 ಆಗಸ್ಟ್ 2022, 12:28 IST
ಅಕ್ಷರ ಗಾತ್ರ

ರಾಮನಗರ: ಜಂತುಹುಳು ಬಾಧೆಯಿಂದ ಅಪೌಷ್ಟಿಕತೆ, ರಕ್ತ ಹೀನತೆ, ಮಾನಸಿಕ ಮತ್ತು ದೈಹಿಕ ಬೆಳವಣಿಗೆಯಲ್ಲಿ ಕುಂಠಿತ ಸೇರಿದಂತೆ ಹಲವು ಸಮಸ್ಯೆಗಳು ಉಂಟಾಗುತ್ತವೆ. ಇದರ ನಿವಾರಣೆಗೆ ಇಲಾಖೆ ವತಿಯಿಂದ 19 ವರ್ಷದ ಎಲ್ಲ ಮಕ್ಕಳಿಗೆ ಆಲ್‌ಬೆಂಡಜೋಲ್ ಮಾತ್ರೆಗಳನ್ನು ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಾಂತರಾಜು ತಿಳಿಸಿದರು.

ಆರೋಗ್ಯ ಇಲಾಖೆ ವತಿಯಿಂದ ನಗರದ ಜಿ.ಕೆ.ಬಿ.ಎಂ.ಎಸ್. ಶಾಲೆಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ರಾಷ್ಟ್ರೀಯ ಜಂತುಹುಳು ನಿವಾರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಂತುಹುಳು ರಹಿತ ಮಕ್ಕಳು ಆರೋಗ್ಯವಂತ ಮಕ್ಕಳು. ಪ್ರತಿಯೊಬ್ಬರು ಮಕ್ಕಳಿಗೆ ತಪ್ಪದೇ ಮಾತ್ರೆ ಪಡೆಯಬೇಕು ಎಂದರು.

ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ರಾಜು ಮಾತನಾಡಿ, ಚನ್ನಪಟ್ಟಣ 73,951, ಕನಕಪುರ 97,229, ಮಾಗಡಿ 63,637, ರಾಮನಗರ 98,149 ರಂತೆ ಒಟ್ಟು ಜಿಲ್ಲೆಯಲ್ಲಿ 1 ರಿಂದ 19 ವರ್ಷದ 3,32,966 ಮಕ್ಕಳಿದ್ದಾರೆ. ಇವರಿಗೆ 1543 ಅಂಗನವಾಡಿ ಕೇಂದ್ರಗಳು, 1705 ಶಾಲಾ - ಕಾಲೇಜುಗಳಲ್ಲಿ ಜಂತುಹುಳು ನಿವಾರಣಾ ಮಾತ್ರೆ ನೀಡಲಾಗುತ್ತಿದೆ. 1 ರಿಂದ 2 ವರ್ಷದ ಮಕ್ಕಳಿಗೆ ಅರ್ಧ ಆಲ್‌ಬೆಂಡಜೋಲ್ (200 ಮಿ.ಗ್ರಾಂ) ಮಾತ್ರೆ, 2 ರಿಂದ 19 ವರ್ಷದ ಮಕ್ಕಳಿಗೆ ಆಲ್‌ಬೆಂಡಜೋಲ್ (400ಮಿ.ಗ್ರಾಂ) ಮಾತ್ರೆ ನೀಡಲಾಗುವುದು ಎಂದು ತಿಳಿಸಿದರು.

ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಆರೋಗ್ಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರಿಂದ ಮನೆಗಳಿಗೆ ಭೇಟಿನೀಡಿ ಮಾತ್ರೆ ನೀಡಲಾಗುವುದು. ಇದರ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಲಾಯಿತು. ಡಿ.ಎಲ್.ಒ ಡಾ. ಮಂಜುನಾಥ್, ಡಿ.ಟಿ.ಒ ಡಾ.ಕುಮಾರ್, ಡಿ.ಎಸ್.ಒ ಡಾ. ಕಿರಣ್‌ಶಂಕರ್, ಡಿ.ಎಂ.ಒ ಡಾ. ಶಶಿಧರ್, ಟಿ.ಎಚ್.ಒ ಡಾ. ಶಶಿಕಲಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ, ಬಿ.ಎಸ್. ಗಂಗಾಧರ್, ವೈದ್ಯಾಧಿಕಾರಿ ಡಾ. ಹರ್ಷಿತ್, ಜಿಲ್ಲಾ ಎಸ್.ಬಿ.ಸಿ.ಸಿ ಸಂಯೋಜಕ ಸುರೇಶ್‌ಬಾಬು, ಮುಖ್ಯ ಶಿಕ್ಷಕ ಕೃಷ್ಣಪ್ಪ, ಸಿ.ಆರ್.ಪಿ. ಮುನಿಯಪ್ಪ, ಎನ್.ಡಿ.ಡಿ ಸಂಯೋಜಕ ಪುರುಷೋತ್ತಮ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಂಭುಲಿಂಗಯ್ಯ, ಮೇಲ್ವಿಚಾರಕಿ ಉಮಾದೇವಿ, ಆರೋಗ್ಯ ಸಿಬ್ಬಂದಿ, ಆಶಾ – ಅಂಗನವಾಡಿ ಕಾರ್ಯಕರ್ತೆಯರು ಮತ್ತು ಶಾಲಾ ಮಕ್ಕಳು ಹಾಗೂ ಪೋಷಕರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT