ಗುರುವಾರ , ಮಾರ್ಚ್ 30, 2023
23 °C

ಮನೆ ಮನೆಗೆ ತೆರಳಿ ಕೋವಿಡ್ ಲಸಿಕೆ ನೀಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕೋವಿಡ್ ಸೋಂಕು ನಿವಾರಣೆಗಾಗಿ ತಾಲ್ಲೂಕಿನ ಹಮಿಲಾಪುರ ಗ್ರಾಮದಲ್ಲಿ ಗಾದಗಿ ಗ್ರಾಮ ಪಂಚಾಯಿತಿ ವತಿಯಿಂದ ಕೋವಿಡ್ ಲಸಿಕಾಕರಣ ನಡೆಯಿತು.

ಪಂಚಾಯಿತಿ, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ಭೇಟಿ ಕೊಟ್ಟು ಕೋವಿಡ್ ಲಸಿಕೆ ಪಡೆದ ಹಾಗೂ ಇನ್ನೂ ಪಡೆಯದೇ ಇರುವವರ ಮಾಹಿತಿ ಪಡೆದರು. ಲಸಿಕೆ ತೆಗೆದುಕೊಳ್ಳದೇ ಇರುವ ಅರ್ಹರಿಗೆ ಸ್ಥಳದಲ್ಲೇ ಲಸಿಕೆ ನೀಡಿದರು. ಕೆಲವರು ಲಸಿಕೆಯ ಎರಡನೇ ಡೋಸ್ ಕೂಡ ಪಡೆದುಕೊಂಡರು.

ಕೋವಿಡ್ ಸೋಂಕು ನಿರ್ಮೂಲನೆಗೆ ಲಸಿಕೆಯೇ ಪರಿಹಾರವಾಗಿದೆ. ಹೀಗಾಗಿ ಅರ್ಹರೆಲ್ಲರೂ ಕಡ್ಡಾಯವಾಗಿ ಲಸಿಕೆ ಪಡೆಯಬೇಕು ಎಂದು ವಿ.ಎಂ. ರಾಂಪೂರೆ ಪಬ್ಲಿಕ್ ಸ್ಕೂಲ್ ಅಧ್ಯಕ್ಷ ಮಹೇಶ ಎಸ್. ರಾಂಪೂರೆ ಮನವಿ ಮಾಡಿದರು.

ಪಿಡಿಒ ಶ್ರೀಧರ ಅವರು ವಿವಿಧ ಕಾರ್ಯಕ್ರಮಗಳ ಮೂಲಕ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ ಜಾಗೃತಿ ಮೂಡಿಸುತ್ತಿದ್ದಾರೆ. ಕೋವಿಡ್ ಲಸಿಕಾಕರಣದ ಶೇ 100 ರಷ್ಟು ಗುರಿ ಸಾಧನೆಗೆ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಸಂಜೀವಕುಮಾರ, ರಾಜೀವ್‍ಗಾಂಧಿ ಗ್ರಾಮೀಣ ವಸತಿ ನಿಗಮ ಲಿಮಿಟೆಡ್‍ನ ಶ್ರೀನಿವಾಸ, ಗಾದಗಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸಿದ್ರಾಮ ಘಂಟೆ, ಪಿಡಿಒ ಶ್ರೀಧರಗೌಡ, ಕಾರ್ಯದರ್ಶಿ ನಶಿರೊದ್ದಿನ್, ಗ್ರಾಮ ಪಂಚಾಯಿತಿ ಸಿಬ್ಬಂದಿ ರಾಕೇಶ, ನಾಗರಾಜ, ಸಂಜು, ಚಿಲ್ಲರ್ಗಿ ಪ್ರಾಥಮಿಕ ಆರೋಗ್ಯ ಕೇಂದ್ರ, ಗಾದಗಿ, ಅಗ್ರಹಾರ ಉಪ ಆರೋಗ್ಯ ಕೇಂದ್ರಗಳ ಸಿಬ್ಬಂದಿ, ಕರ್ನಾಟಕ ಪದವಿ ಕಾಲೇಜು ವಿದ್ಯಾರ್ಥಿಗಳು, ಎನ್‍ಎಸ್‍ಎಸ್, ಎನ್‍ಸಿಸಿ ಕೆಡೆಟ್‍ಗಳು ಪಾಲ್ಗೊಂಡಿದ್ದರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.