ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರುನಮನ, ಅಭಿನಂದನಾ ಸಮಾರಂಭ ನಾಳೆ

Last Updated 9 ಮಾರ್ಚ್ 2020, 16:08 IST
ಅಕ್ಷರ ಗಾತ್ರ

ವಿಜಯಪುರ: ಸಮಸ್ತ ಬ್ರಾಹ್ಮಣ ಸಮಾಜದ ವತಿಯಿಂದ ನಗರದ ವಿ.ಬಿ. ದರಬಾರ ಪ್ರೌಢಶಾಲೆಯ ಒಳಾಂಗಣ ಮೈದಾನದಲ್ಲಿ ಮಾ. 11ರಂದು ಸಂಜೆ 5 ಗಂಟೆಗೆ ಗುರುನಮನ ಹಾಗೂ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಂಜೀವಾಚಾರ್ಯ, ‘ವಿಶ್ವೇಶತೀರ್ಥ ಶ್ರೀಗಳು ಇಂದು ನಮ್ಮೊಂದಿಗೆ ಇಲ್ಲ. ಆ ಮಹಾನುಭಾವರಿಗೆ ನಮ್ಮ ಸಮಾಜದಿಂದ ಕೃತಜ್ಞತಾ ಸಮರ್ಪಣೆ ರೂಪದಲ್ಲಿ ಗುರುನಮನ, ಸಮಾಜ ಸೇವಕ ಶ್ರೀಹರಿ ಗೊಳಸಂಗಿ ಅವರನ್ನು ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಅಭಿನಂದನೆ ಸಲ್ಲಿಸಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದರು.

‘ಉಡುಪಿ ಪೇಜಾವರ ಅಧೋಕ್ಷಜ ಮಠದ ವಿಶ್ವಪ್ರಸನ್ನ ತೀರ್ಥ, ವೀರಘಟ್ಟ–ಹುಣಸಿಹೊಳೆ ಕಣ್ವಮಠದ ವಿದ್ಯಾಕಣ್ವ ವಿರಾಜ ತೀರ್ಥರು ಸಾನ್ನಿಧ್ಯ ವಹಿಸುವರು. ಸರ್ವಜ್ಞ ವಿಹಾರ ವಿದ್ಯಾಪೀಠದ ಕುಲಪತಿ ಪಂಡಿತ ಮಧ್ವಾಚಾರ್ಯ ಮೊಖಾಶಿ, ಜಯತೀರ್ಥ ವಿದ್ಯಾಪೀಠದ ಪ್ರಾಂಶುಪಾಲ ಪಂಡಿತ ಸತ್ಯಧ್ಯಾನಾಚಾರ್ಯ, ಬಿಜೆಪಿ ರಾಜ್ಯ ವಕ್ತಾರ ಡಾ.ವಾಮನಾಚಾರ್ಯ, ಅದಮ್ಯ ಚೇತನ ಸಂಸ್ಥೆಯ ಅಧ್ಯಕ್ಷೆ ತೇಜಸ್ವಿನಿ ಅನಂತಕುಮಾರ್, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಸಗೋಡು ಜಯಸಿಂಹ, ಉದ್ಯಮಿ ಡಾ.ಸುಬ್ರಹ್ಮಣ್ಯ ಶರ್ಮಾ, ಪೇಜಾವರ ಅಧೋಕ್ಷಜ ಮಠದ ವಿಷ್ಣುಮೂರ್ತಿ ಆಚಾರ್ಯ, ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀಹರಿ ಗೊಳಸಂಗಿ, ಶೈಲಜಾ ಬಸನಗೌಡ ಪಾಟೀಲ ಯತ್ನಾಳ ಪಾಲ್ಗೊಳ್ಳುವರು’ ಎಂದು ತಿಳಿಸಿದರು.

ಮುಖಂಡರಾದ ಪಿ.ಬಿ.ಹಂಗರಗಿ, ಆನಂದ ಜೋಶಿ, ಅಶೋಕ ಕಾಳಗಿ, ಶ್ರೀನಿವಾಸ ಬೆಟಗೇರಿ, ಕೃಷ್ಣ ಗೊನ್ಹಾಳಕರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT