ಹರಪನಹಳ್ಳಿ (ವಿಜಯನಗರ ಜಿಲ್ಲೆ): ಪಟ್ಟಣದ ಸರ್ಕಾರಿ ಜೂನಿಯರ್ ಕಾಲೇಜಿನ ಕೇಂದ್ರಕ್ಕೆ ಪರೀಕ್ಷೆ ಬರೆಯಲು ಬಂದಿದ್ದ 30ಕ್ಕೂ ಹೆಚ್ಚಿನ ವಿದ್ಯಾರ್ಥಿಗಳ ಹಾಜರಾತಿ ಶೇ 75ಕ್ಕಿಂತ ಕಡಿಮೆ ಇದ್ದಿದ್ದರಿಂದ ಪಿಯು ಮಂಡಳಿಯು ಅವರ ಹೆಸರಿನ ಒಎಂಆರ್ ಶೀಟ್ ಕಳುಹಿಸದ ಕಾರಣ ಗುರುವಾರ ಅವರಿಗೆ ಪರೀಕ್ಷೆ ಬರೆಯಲು ಸಾಧ್ಯವಾಗಲಿಲ್ಲ.
‘ಪಟ್ಟಣದ ಎಚ್.ಪಿ.ಎಸ್. ಪಿಯು ಕಾಲೇಜಿನ ಒಟ್ಟು 39 ವಿದ್ಯಾರ್ಥಿಗಳ ಹಾಜರಾತಿ ಶೇ 75ಕ್ಕಿಂತ ಕಡಿಮೆ ಇತ್ತು. ಅದರಲ್ಲಿ 30 ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರವೇಶ ಪತ್ರಗಳು ಬಂದಿವೆ. ಆದರೆ, ಒಎಂಆರ್ ಶೀಟ್‌ನಲ್ಲಿ ಇವರ ಹೆಸರುಗಳಿಲ್ಲ. ಹೀಗಾಗಿ ಅವರಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಲ್ಲ’ ಎಂದು ಪರೀಕ್ಷಾ ಕೇಂದ್ರದ ನೋಡಲ್ ಅಧಿಕಾರಿ ವೆಂಕಟೇಶ್ ತಿಳಿಸಿದ್ದಾರೆ.
‘ವಿದ್ಯಾರ್ಥಿಗಳ ಹಾಜರಾತಿ ಶೇ 75ಕ್ಕಿಂತ ಕಡಿಮೆಯಿದ್ದ ಕಾರಣ ಪರೀಕ್ಷೆಗೆ ಅವಕಾಶ ಕಲ್ಪಿಸಿಲ್ಲ. ಈ ವಿಷಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಎಲ್ಲ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ ಕಲ್ಪಿಸಲಾಗುವುದು’ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಉಪನಿರ್ದೇಶಕ ಎಚ್.ಸುಗೇಂದ್ರ ಪ್ರತಿಕ್ರಿಯಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.