ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಸನ | 70 ಗ್ರಾಂ ಚಿನ್ನಾಭರಣ ಕಳವು

Published 10 ಜುಲೈ 2024, 14:46 IST
Last Updated 10 ಜುಲೈ 2024, 14:46 IST
ಅಕ್ಷರ ಗಾತ್ರ

ಹಾಸನ: ತಾಲ್ಲೂಕಿನ ಮೂಲದುದ್ದ ಗ್ರಾಮದ ಮನೆಯ ಬೀಗ ಮುರಿತು 70 ಗ್ರಾಂ ಚಿನ್ನಾಭರಣ ಕಳವು ಮಾಡಲಾಗಿದೆ. ಗ್ರಾಮದ ಸೋಮಶೇಖರ ಎಂಬುವವರು, ಮಂಡ್ಯ ಜಿಲ್ಲೆ ಆದಿಚುಂಚನಗಿರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳನ್ನು ನೋಡಿಕೊಂಡು ಬರಲೆಂದು ಜುಲೈ 6ರಂದು ಸಂಜೆ ಮನೆಗೆ ಬೀಗ ಹಾಕಿ ತೆರಳಿದ್ದರು. ಜುಲೈ 9 ರಂದು ಬೆಳಿಗ್ಗೆ ಪಕ್ಕದ ಮನೆಯವರು ಕರೆ ಮಾಡಿ, ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ತಿಳಿಸಿದ್ದಾರೆ. ಗ್ರಾಮಕ್ಕೆ ಬಂದು ನೋಡಿದಾಗ, ಮನೆಯ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು ಬೀರುವನ್ನು ಮುರಿದು ₹ 3 ಲಕ್ಷ ಮೌಲ್ಯದ 70 ಗ್ರಾಂ ಚಿನ್ನಾಭರಣ ಕಳವು ಮಾಡಿದ್ದಾರೆ. ದುದ್ದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT