ಹಾಸನ: ತಾಲ್ಲೂಕಿನ ಶಂಕರನಹಳ್ಳಿ ಬಳಿ ಸೋಮವಾರ ರಾತ್ರಿ ಬೈಕ್‌ನಲ್ಲಿ ತೆರಳುತ್ತಿದ್ದ ವ್ಯಕ್ತಿಗೆ ಕಿಡಿಗೇಡಿಗಳು ಚೂರಿಯಿಂದ ಇರಿದು ₹10 ಸಾವಿರ ಹಣ ದೋಚಿದ್ದಾರೆ.
ದೋರನಹಳ್ಳಿ ಗ್ರಾಮದ ಪುಟ್ಟರಾಜು ಎಂಬುವರು, ಕೆಲಸ ಮುಗಿಸಿ ಮನೆಗೆ ತೆರಳುವಾಗ, ಬೈಕ್‌ಗಳಲ್ಲಿ ಬಂದ ನಾಲ್ವರು ಕಿಡಿಗೇಡಿಗಳು ಪುಟ್ಟರಾಜು ಬೈಕ್ ಅಡ್ಡಗಟ್ಟಿ ಚಾಕುವಿನಿಂದ ಇರಿದು ಎಡ ತೊಡೆಗೆ ಚುಚ್ಚಿ ಪುಟ್ಟರಾಜು ಅವರ ಜೇಬಿನಲ್ಲಿದ್ದ ₹10 ಸಾವಿರ ಹಣ ಕಿತ್ತು ಕೊಂಡಿದ್ದಾರೆ. ಅದೇ ಸಮಯಕ್ಕೆ ಹಾಸನ ಕಡೆಯಿಂದ ಕೆಲ ವಾಹನ ಬಂದಿದ್ದರಿಂದ ಆರೋಪಿಗಳು ಪರಾರಿಯಾಗಿದ್ದಾರೆ. ಪುಟ್ಟರಾಜು ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಗೊರೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.