ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ | ಆರು ಮಂದಿ ಸಾವು, 126 ಕೋವಿಡ್‌ ಪ್ರಕರಣ ಪತ್ತೆ

ಆಸ್ಪತ್ರೆಯಿಂದ 100 ಮಂದಿ ಬಿಡುಗಡೆ
Last Updated 10 ಆಗಸ್ಟ್ 2020, 13:20 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಹೊಸದಾಗಿ 126 ಕೋವಿಡ್ ಪ್ರಕರಣ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 3585 ಕ್ಕೆ ಏರಿದೆ.

ಸೋಮವಾರ 100 ಜನ ಸೇರಿದಂತೆ ಈವರೆಗೆ 1416 ಮಂದಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 2062 ಸಕ್ರಿಯ ಪ್ರಕರಣಗಳಿವೆ. ಇದರಲ್ಲಿ 41 ಜನ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕಿನಿಂದ ಆರು ಜನ ಅಸುನೀಗಿದ್ದು, ಇದರೊಂದಿಗೆ ಮೃತರ ಸಂಖ್ಯೆ 107 ತಲುಪಿದೆ.

ಶೀತ, ಜ್ವರ ಮಾದರಿ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅರಸೀಕೆರೆ ತಾಲ್ಲೂಕಿನ 61 ವರ್ಷ, 65 ವರ್ಷದ ಪುರುಷರು ಹಾಗೂ 45 ವರ್ಷದ ಮಹಿಳೆ ಹಿಮ್ಸ್‌ನಲ್ಲಿ ದಾಖಲಾಗಿದ್ದರು. ಹೊಳೆನರಸೀಪುರದ 67 ವರ್ಷ, ಹಾಸನ ತಾಲ್ಲೂಕಿನ 46 ವರ್ಷದ ಪುರುಷ ಹಾಗೂ ಅರಕಲಗೂಡು ತಾಲ್ಲೂಕಿನ 45 ವರ್ಷದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಹೊಸದಾಗಿ ಅರಸೀಕೆರೆ 14, ಚನ್ನರಾಯಪಟ್ಟಣ 11, ಆಲೂರು 4, ಹಾಸನ 61, ಹೊಳೆನರಸೀಪುರ 23,
ಅರಕಲಗೂಡು 5, ಬೇಲೂರು 6, ಸಕಲೇಶಪುರ ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ ತಿಳಿಸಿದರು.

ಸೋಂಕಿತರ ಜತೆ ಪ್ರಾಥಮಿಕ ಸಂಪರ್ಕ, ಶೀತ ಜ್ವರ ಮಾದರಿ ಅನಾರೋಗ್ಯ, ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದವರಿಗೆ ಕೋವಿಡ್‌ ದೃಢಪಟ್ಟಿದೆ. ಕೆಲ ಪ್ರಕರಣಗಳಲ್ಲಿ ಸೋಂಕಿನ ಮೂಲ ಪತ್ತೆ ಮಾಡಲಾಗುತ್ತಿದೆ.ಶೀತ, ಜ್ವರ, ಕೆಮ್ಮು, ಗಂಟಲು ನೋವು ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿರುವವರು ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ವೈದ್ಯಾಧಿಕಾರಿ ಹಾಗೂ ಸಹಾಯವಾಣಿಗೆ ಕರೆ ಮಾಡಿ ಸಲಹೆ ಪಡೆದುಕೊಳ್ಳಬಹುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT