ಮಂಗಳವಾರ, ಸೆಪ್ಟೆಂಬರ್ 28, 2021
21 °C

12 ಅಡಿ ಕಾಳಿಂಗ ಸರ್ಪ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೆತ್ತೂರು: ಹೋಬಳಿಯ ಬ್ಯಾಗಡಹಳ್ಳಿ ಗ್ರಾಮದಲ್ಲಿ 12 ಅಡಿ ಉದ್ದದ ಭಾರಿ ಕಾಳಿಂಗ ಸರ್ಪವನ್ನು ಭಾನುವಾರ ಹಿಡಿದು ರಕ್ಷಿತಾರಣ್ಯಕ್ಕೆ ಬಿಡಲಾಯಿತು.

ಪಶ್ಚಿಮಘಟ್ಟ ತಪ್ಪಲಿನ ಗ್ರಾಮದ ರೈತ ಆಕಾಶ ಅವರ ಕಾಫಿ ತೋಟದಲ್ಲಿ ಕಾಳಿಂಗ ಸರ್ಪ ಕಾಣಿಸಿಕೊಂಡಿದೆ. ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಅಧಿಕಾರಿಗಳು ಸೋಮವಾರಪೇಟೆ ಉರಗ ಪ್ರೇಮಿ ಸ್ನೇಕ್‌ ರಘು, ಜಾನಿ ಸುಮಾರು 3 ಗಂಟೆಗೂ ಹೆಚ್ಚು ಕಾರ್ಯಾಚರಣೆ ನಡೆಸಿ ಸುಮಾರು 12 ಅಡ್ಡಿ ಉದ್ದ ಹಾಗೂ 9 ಕೆಜಿ ತೂಕವಿದ್ದ ಕಾಳಿಂಗ ಸರ್ಪವನ್ನು ಹಿಡಿದು ಬಿಸಲೆ ರಕ್ಷಿತಾರಣ್ಯಕ್ಕೆ ಬಿಡಲಾಯಿತು.

ಕಾರ್ಯಾಚರಣೆಯಲ್ಲಿ ಅರಣ್ಯ ರಕ್ಷಕ ನವೀನ್‌ಕುಮಾರ್, ಸಿಬ್ಬಂದಿ ಆಕಾಶ, ಜೀವನ್, ಅಖಿಲ್, ಅಭಿಷೇಕ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು