ಹೆತ್ತೂರು: ಹಾವು ಕಚ್ಚಿ ಬಾಲಕ ಸಾವು

ಹೆತ್ತೂರು: ಸಮೀಪದ ವನಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಹಳ್ಳಿ ಗ್ರಾಮದಲ್ಲಿ ಹಾವು ಕಚ್ಚಿ ಬಾಲಕ ಮೃತಪಟ್ಟಿದ್ದಾನೆ.
ಗ್ರಾಮದ ಶಶಿಕಲಾ ಅವರ ಪುತ್ರ ನಿಶಾಂತ (12) ಮೃತ ಬಾಲಕ. ಸೋಮವಾರ ಸಂಜೆ ಮನೆಯ ಮುಂಭಾಗದ ಕಾಫಿ ತೋಟದಲ್ಲಿ ಹಾವು ಕಚ್ಚಿದ್ದು, ಚಿಕಿತ್ಸೆಗಾಗಿ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಮಂಗಳವಾರ ಮೃತಪಟ್ಟಿದ್ದಾನೆ.
ಬಾಲಕ ವನಗೂರು ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದನು. ಒಂದು ವರ್ಷದ ಹಿಂದೆ ಈತನ ತಂದೆ ಸಾವಿನ್ನಪ್ಪಿದ್ದರು. ಯಸಳೂರು ಠಾಣೆಯಲ್ಲಿ ದೂರು ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.