ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದೇ ದಿನ 1276 ಮಂದಿ ಬಿಡುಗಡೆ

Last Updated 18 ಮೇ 2021, 12:38 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಮಂಗಳವಾರ ಹೊಸ ಸೋಂಕು ಹಾಗೂ ಮರಣ ಪ್ರಕರಣಗಳ ಸಂಖ್ಯೆ ಅಲ್ಪ ಕಡಿಮೆ ಆಗಿದೆ. 896 ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ 18 ಮಂದಿ ಮೃತಪಟ್ಟಿದ್ದಾರೆ.

ಇದರ ನಡುವೆ ಚೇತರಿಕೆ ಪ್ರಮಾಣದಲ್ಲೂ ಗಣನೀಯ ಏರಿಕೆಯಾಗಿದ್ದು, 1276 ಸೋಂಕಿತರ ಆರೋಗ್ಯದಲ್ಲಿ ಚೇತರಿಕೆಯಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಒಟ್ಟು 49918 ಮಂದಿ ಚೇತರಿಸಿಕೊಂಡಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 66589ಕ್ಕೆ ಏರಿಕೆಯಾಗಿದೆ. ಕಾಯಿಲೆಯಿಂದ ಈವರೆಗೆ ಮೃತಪಟ್ಟವರ ಸಂಖ್ಯೆ 849. 14546 ಸಕ್ರಿಯ ಪ್ರಕರಣಗಳ ಪೈಕಿ 135 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸದಾಗಿ ಆಲೂರು ತಾಲ್ಲೂಕಿನ 23, ಅರಕಲಗೂಡು 92, ಅರಸೀಕೆರೆ 136, ಬೇಲೂರು 64, ಚನ್ನರಾಯಪಟ್ಟಣ 169, ಹಾಸನ 317, ಹೊಳೆನರಸೀಪುರ 55, ಸಕಲೇಶಪುರ 20 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಹಾಸನ ತಾಲ್ಲೂಕಿನ 6, ಹೊಳೆನರಸೀಪುರ 4, ಅರಸೀಕೆರೆ 3, ಅರಕಲಗೂಡು 2, ಆಲೂರು, ಬೇಲೂರು, ಸಕಲೇಶಪುರ ತಲಾ ಒಬ್ಬರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್ ಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT