ಸೋಮವಾರ, ಅಕ್ಟೋಬರ್ 26, 2020
21 °C

ಹಾಸನ: ₹ 13 ಲಕ್ಷ ಮೌಲ್ಯದ 130 ಕೆ.ಜಿ. ಗಾಂಜಾ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಜಿಲ್ಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ₹13 ಲಕ್ಷ ಬೆಲೆ ಬಾಳುವ 130 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಬಾಣಾವಾರ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹಳ್ಳಿ ಗ್ರಾಮದಲ್ಲಿ ಸಂತೋಷ್ ಎಂಬಾತ ಇಟ್ಟಿಗೆ ಫ್ಯಾಕ್ಟರಿ ಹಿಂಭಾಗ 60*20 ಅಡಿ ವಿಸ್ತೀರ್ಣದ ಜಾಗದಲ್ಲಿ ಗಾಂಜಾ ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್ ಮತ್ತು ಪೊಲೀಸ್ ಸಿಬ್ಬಂದಿ ದಾಳಿ ನಡೆಸಿ ಅಪಾರ ಪ್ರಮಾಣದ ಗಾಂಜಾ ವಶಪಡಿಸಿಕೊಂಡಿದ್ದಾರೆ. ಆರೋಪಿಯನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ.

ಕಾರ್ಯಾಚರಣೆಯಲ್ಲಿ ವೃತ್ತ ನಿರೀಕ್ಷಕ ಕೆ.ಎಂ. ವಸಂತ್, ಅರುಣ್ ಕುಮಾರ್, ಆನಂದ್ ಮತ್ತು ಸಿಬ್ಬಂದಿಗಳಾದ ಪ್ರಕಾಶ್, ಮೋಹನ್ ಕುಮಾರ್, ದಿಲೀಪ್ ಕುಮಾರ್, ನಾಗರಾಜ್, ಹೇಮಂತ್ ಕುಮಾರ್, ಹರೀಶ್, ಪುಟ್ಟಸ್ವಾಮಿ, ನಾಗ ರಾಜನಾಯ್ಕ, ದೇವರಾಯ ಹೂಗಾರ್ ಭಾಗವಹಿಸಿದ್ದರು.

ಗಾಂಜಾ ಬೆಳೆಯುತ್ತಿರುವವರು ಹಾಗೂ ಮಾದಕ ವಸ್ತು ಮಾರಾಟ ಮಾಡುವವರ ಬಗ್ಗೆ ಸಹಾಯವಾಣಿ 1908 ಕರೆಮಾಡಿ ಮಾಹಿತಿ ನೀಡಬಹುದು. ಮಾಹಿತಿದಾರರ ವಿವರವನ್ನು ಗೌಪ್ಯವಾಗಿ ಇಡಲಾಗುವುದು ಎಂದು ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ್ ಗೌಡ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.