ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ | ಒಂದೇ ದಿನ 149 ಜನ ಗುಣಮುಖ

145 ಜನರಿಗೆ ಕೊರೊನಾ ಪಾಸಿಟಿವ್‌, ಮೂರು ಜನರ ಸಾವು
Last Updated 11 ಆಗಸ್ಟ್ 2020, 16:07 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಒಂದೇ ದಿನ 149 ಜನ ಕೋವಿಡ್‌ ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ ಬಿಡುಗಡೆ ಆದವರ ಸಂಖ್ಯೆ 1526ಕ್ಕೆ ಏರಿಕೆಯಾಗಿದೆ.

ಹೊಸದಾಗಿ 145 ಜನರಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 3731ಕ್ಕೆ ಏರಿಕೆಯಾಗಿದೆ. ಚಿಕಿತ್ಸೆಗೆ ಸ್ಪಂದಿಸದೆ 3 ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ 110 ತಲುಪಿದೆ.

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅರಸೀಕೆರೆ ತಾಲ್ಲೂಕಿನ 50 ವರ್ಷದ ಪುರುಷ, 40 ವರ್ಷದ ಮಹಿಳೆ ಹಾಗೂ
ಚಿಕ್ಕಮಗಳೂರಿನ 65 ವರ್ಷದ ವ್ಯಕ್ತಿ ಹಿಮ್ಸ್‌ಗೆ ದಾಖಲಾಗಿದ್ದರು. ಮೂವರಿಗೂ ಕೋವಿಡ್‌ ದೃಢಪಟ್ಟಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ ತಿಳಿಸಿದರು.

ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದ ಚನ್ನರಾಯಪಟ್ಟಣದ 38 ವರ್ಷ, ಅರಸೀಕೆರೆಯ 40 ವರ್ಷದ ವ್ಯಕ್ತಿಗೆ ಸೋಂಕು ತಗುಲಿದೆ. ಉಳಿದ ಪ್ರಕರಣಗಳಲ್ಲಿ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ಕೋವಿಡ್‌ ದೃಢಪಟ್ಟಿದೆ. 2095 ಸಕ್ರಿಯ ಪ್ರಕರಣಗಳಿವೆ. ತೀವ್ರ ನಿಗಾ ಘಟಕದಲ್ಲಿ 42 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಹೋಮ್ ಐಸೋಲೇಶನ್‍ನಲ್ಲಿರುವ ಪ್ರಾಥಮಿಕ ಸಂಪರ್ಕಿತರು ಕಡ್ಡಾಯವಾಗಿ ಎನ್-95 ಮಾಸ್ಕ್ ಧರಿಸಬೇಕು. ಅಲ್ಲದೇ, ಅವರೊಂದಿಗೆ ಕುಟುಂಬಸ್ಥರು ಅಂತರ ಕಾಯ್ದುಕೊಳ್ಳಬೇಕು. ಆರೋಗ್ಯ ಸಮಸ್ಯೆ ಹಾಗೂ ರೋಗದ ಲಕ್ಷಣಗಳೇನಾದರೂ ಇದ್ದಲ್ಲಿ ಆರೋಗ್ಯ ಸಹಾಯವಾಣಿ ಹಾಗೂ ತಾಲ್ಲೂಕು ವೈದ್ಯರನ್ನು ಸಂಪರ್ಕಿಸಬೇಕು ಎಂದು ತಿಳಿಸಿದರು.

ಹೊಸದಾಗಿ ಅರಸೀಕೆರೆ 17, ಚನ್ನರಾಯಪಟ್ಟಣ 42, ಆಲೂರು 2, ಹಾಸನ 32, ಹೊಳೆನರಸೀಪುರ 4, ಅರಕಲಗೂಡು 29, ಬೇಲೂರು 16 ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಸೋಂಕು ತಗುಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT