ಬುಧವಾರ, ಆಗಸ್ಟ್ 10, 2022
20 °C

ಹಾಸನ: 1524 ಮಂದಿ ಆರೋಗ್ಯದಲ್ಲಿ ಚೇತರಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಜಿಲ್ಲೆಯಲ್ಲಿ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತು ಸಾವಿರ ಪ್ರಮಾಣ ಕಡಿಮೆಯಾಗುತ್ತಿದೆ. ಶನಿವಾರ 668 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಚಿಕಿತ್ಸೆ ಸ್ಪಂದಿಸದೆ 8 ಮಂದಿ ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 95,190 ಏರಿಕೆಯಾಗಿದ್ದು, 86,209 ಜನರ ಆರೋಗ್ಯದಲ್ಲಿ ಚೇತರಿಕೆಯಾಗಿದೆ. 1524 ಜನ ಆಸ್ಪತ್ರೆಯಿಂದ ಶನಿವಾರ ಬಿಡುಗಡೆಯಾಗಿದ್ದಾರೆ. 7863 ಸಕ್ರಿಯ ಪ್ರಕರಣಗಳ ಪೈಕಿ 138 ಜನರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್‌ ಕಾಯಿಲೆಗೆ ಈವರೆಗೆ 118 ಜನರು ಮೃತಪಟ್ಟಿದ್ದಾರೆ.

ಹೊಸದಾಗಿ ಆಲೂರು 35, ಅರಕಲಗೂಡು 100, ಅರಸೀಕೆರೆ 80, ಬೇಲೂರು 43, ಚನ್ನರಾಯಪಟ್ಟಣ 132, ಹಾಸನ 177, ಹೊಳೆನರಸೀಪುರ 58, ಸಕಲೇಶಪುರ 41, ಇತರೆ ಜಿಲ್ಲೆಯ ಇಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ಅಲ್ಲದೇ ಅರಸೀಕೆರೆ 4, ಹಾಸನ 2, ಹೊಳೆನರಸೀಪುರ ಹಾಗೂ ಚನ್ನರಾಯಪಟ್ಟಣದ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‌ ಕುಮಾರ್‌ ತಿಳಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು