ಸೋಮವಾರ, ಮೇ 10, 2021
25 °C

155 ಮಂದಿಗೆ ಕೊರೊನಾ ಸೋಂಕು ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಜಿಲ್ಲೆಯಲ್ಲಿ ಹೊಸದಾಗಿ 155 ಮಂದಿ ಕೋವಿಡ್‌ 19 ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 31,138ಕ್ಕೆ ಏರಿಕೆಯಾಗಿದೆ.

1,232 ಸಕ್ರಿಯ ಪ್ರಕರಣಗಳ ಪೈಕಿ 16 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ ಬಿಡುಗಡೆಯಾದ 72 ಮಂದಿ ಸೇರಿದಂತೆ ಈವರೆಗೆ 29,421 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕಾಯಿಲೆಯಿಂದ 485 ಮಂದಿ ಮೃತಪಟ್ಟಿದ್ದಾರೆ.

ಹೊಸದಾಗಿ ಹಾಸನ ತಾಲ್ಲೂಕಿನ 70 ಮಂದಿ, ಅರಸೀಕೆರೆ 32, ಚನ್ನರಾಯಪಟ್ಟಣ 13, ಬೇಲೂರು 3,  ಹೊಳೆನರಸೀಪುರ 4, ಆಲೂರು 2, ಸಕಲೇಶಪುರ 23, ಅರಕಲಗೂಡು 6 ಹಾಗೂ ಇತರೆ ಜಿಲ್ಲೆಯ 2 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ಸತೀಶ್ ಕುಮಾರ್‌ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.