20 ಪರ್ಸೆಂಟ್‌ ಕಮಿಷನ್‌ ಪಡೆದಿರುವುದು ಸಾಬೀತು ಪಡಿಸಿ: ಪರಮೇಶ್ವರ್ ಸವಾಲು

ಶುಕ್ರವಾರ, ಏಪ್ರಿಲ್ 26, 2019
33 °C

20 ಪರ್ಸೆಂಟ್‌ ಕಮಿಷನ್‌ ಪಡೆದಿರುವುದು ಸಾಬೀತು ಪಡಿಸಿ: ಪರಮೇಶ್ವರ್ ಸವಾಲು

Published:
Updated:

ಹಾಸನ: 20 ಪರ್ಸೆಂಟ್‌ ಕಮಿಷನ್‌ ಸರ್ಕಾರ ಎಂದು ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಮಾಡಿರುವ ಆರೋಪವನ್ನು ಸಾಬೀತು ಪಡಿಸುವಂತೆ ಉಪ ಉಖ್ಯಮಂತ್ರಿ ಜಿ.ಪರಮೇಶ್ವರ್‌ ಅವರು ಪ್ರಧಾನಿ ನರೇಂದ್ರ ಮೋದಿಗೆ ಸವಾಲು ಹಾಕಿದರು.

‘ರಾಜ್ಯದಲ್ಲಿ ಹಿಂದೆ ಇದ್ದಿದ್ದು 10 ಪರ್ಸೆಂಟ್‌ ಸರ್ಕಾರ, ಈಗಿರುವುದು 20 ಪರ್ಸೆಂಟ್‌ ಕಮಿಷನ್‌ ಎಂದಿದ್ದಾರೆ. ಪ್ರಧಾನಿಗೆ ಬೆರಳ ತುದಿಯಲ್ಲಿಯೇ ಎಲ್ಲಾ ಮಾಹಿತಿಗಳು ಸಿಗುತ್ತವೆ. ಮೈತ್ರಿ ಸರ್ಕಾರ ಯಾವ ಯೋಜನೆ ಮತ್ತು ಕ್ಷೇತ್ರದಲ್ಲಿ ಕಮಿಷನ್ ಪಡೆದಿದೆ ಎಂಬುದನ್ನು ಸಾಬೀತು ‍ಪಡಿಸಲಿ. ಇಲ್ಲವಾದರೆ ಜವಾಬ್ದಾರಿ ಸ್ಥಾನದಲ್ಲಿರುವವರು ಈ ರೀತಿ ಹೇಳಿಕೆ ನೀಡಿರುವುದು ಅಕ್ಷಮ್ಯ ಅಪರಾಧ. ಜನತೆ ಚುನಾಯಿಸಿರುವ ಸರ್ಕಾರ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ಸಂವಿಧಾನದ ಗಣತಂತ್ರ ವ್ಯವಸ್ಥೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಣ್ಣ, ತಮ್ಮಂದಿರು, ಕುಟುಂಬದ ರೀತಿ ಇರಬೇಕು. ಹೀಗಿರುವಾಗ ಒಂದು ರಾಜ್ಯದ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡಿರುವುದನ್ನು ಸಹಿಸಲು ಆಗುವುದಿಲ್ಲ’ ಎಂದು ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

‘ಪುಲ್ವಾಮಾ ಹಾಗೂ ಬಾಲಾಕೋಟ್‌ ದಾಳಿಯನ್ನು ಬಿಜೆಪಿ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಇದನ್ನು ಚುನಾವಣಾ ಆಯೋಗದ ಗಮನಕ್ಕೂ ತರಲಾಗಿದೆ. ಸೈನಿಕರು, ದೇಶದ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ಆಯೋಗ ಹೇಳಿದೆ. ಆದರೂ ಮೋದಿ ಅಧಿಕಾರ ದುರ್ಬಳಕೆ ಮಾಡಿಕೊಂಡು ರಕ್ಷಣಾ ಪಡೆಗಳನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಳ್ಳುತ್ತಿದ್ದಾರೆ’ ಎಂದು ಬೇಸರ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 8

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !