ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: 206 ಜನರಿಗೆ ಕೊರೊನಾ ಸೋಂಕು

ಎರಡು ಸಾವು, 144 ಮಂದಿ ಗುಣಮುಖ
Last Updated 25 ಆಗಸ್ಟ್ 2020, 15:58 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಹೊಸದಾಗಿ ಮಂಗಳವಾರ 206 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ
6378ಕ್ಕೆ ಏರಿಕೆಯಾಗಿದೆ. ಇಬ್ಬರ ಸಾವಿನೊಂದಿಗೆ ಮೃತರ ಸಂಖ್ಯೆ 167 ತಲುಪಿದೆ.

ಬಿಡುಗಡೆಯಾದ 144 ಜನರು ಸೇರಿ ಈವರೆಗೆ 4241 ಮಂದಿ ಗುಣಮುಖರಾಗಿದ್ದಾರೆ. 1970 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 57 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜ್ವರದಿಂದ ಬಳಲುತ್ತಿದ್ದಬೇಲೂರು, ಚನ್ನರಾಯಪಟ್ಟಣ ತಾಲ್ಲೂಕಿನ ತಲಾ ಒಬ್ಬರು ಮೃತಪಟ್ಟಿದ್ದಾರೆ. ಪ್ರಾಥಮಿಕ ಸಂಪರ್ಕಿತರು, ಅನ್ಯ ಜಿಲ್ಲೆ ಪ್ರಯಾಣ ಇತಿಹಾಸ ಹೊಂದಿದವರಿಗೆ ಸೋಂಕು ತಗುಲಿದೆ. ಕೆಲ ಪ್ರಕರಣಗಳಲ್ಲಿ ಸೋಂಕಿನ ಮೂಲ ಪತ್ತೆ ಮಾಡಲಾಗುತ್ತಿದೆ.

ಹೊಸದಾಗಿ ಅರಸೀಕೆರೆ 38, ಚನ್ನರಾಯಪಟ್ಟಣ 26, ಆಲೂರು 10, ಹಾಸನ 82, ಹೊಳೆನರಸೀಪುರ 8, ಅರಕಲಗೂಡು 17, ಬೇಲೂರು 22, ಸಕಲೇಶಪುರ ತಾಲ್ಲೂಕಿನ ಇಬ್ಬರು ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT