ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

21 ಮಂದಿಗೆ ಸೋಂಕು: ಮತ್ತೊಂದು ಸಾವು

ಮೃತರ ಸಂಖ್ಯೆ 25ಕ್ಕೆ ಏರಿಕೆ, ಈವರೆಗೆ 529 ಮಂದಿ ಬಿಡುಗಡೆ
Last Updated 17 ಜುಲೈ 2020, 13:36 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ 21 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಹಾಸನ ತಾಲ್ಲೂಕಿನ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಸೋಂಕಿತರ ಸಂಖ್ಯೆ792 ಕ್ಕೆ ಏರಿದ್ದು, 25 ಸಾವು ಪ್ರಕರಣ ವರದಿಯಾಗಿದೆ. ಈವರೆಗೆ 529 ಜನರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. 238 ಸಕ್ರಿಯ ಪ್ರಕರಣಗಳಿದ್ದು, 13 ಜನರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅನಾರೋಗ್ಯ ಕಾರಣದಿಂದ ಜುಲೈ 6 ರಂದು ಹಿಮ್ಸ್‌ಗೆ ದಾಖಲಾಗಿದ್ದ 50 ವರ್ಷ ವ್ಯಕ್ತಿ ಗೆ ಸೋಂಕು ದೃಢಪಟ್ಟಿದ್ದ ಹಿನ್ನೆಲೆಯ ಕೋವಿಡ್‌ ಆಸ್ಪತ್ರೆಗೆ ದಾಖಲಿಸಿ ವೆಂಟಿಲೇಟರ್‌ ಅಳವಡಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಮಧುಮೇಹ, ರಕ್ತದೊತ್ತಡ, ಮೂತ್ರಪಿಂಡ ಸಮಸ್ಯೆಯಿಂದ ಬಳುತ್ತಿದ್ದರು. ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಮಾರ್ಗಸೂಚಿ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಹೊಸದಾಗಿ ಅರಸೀಕೆರೆ ತಾಲ್ಲೂಕಿನಲ್ಲಿ 5, ಚನ್ನರಾಯಪಟ್ಟಣ 3, ಹಾಸನ 9, ಸಕಲೇಶಪುರ, ಅರಕಲಗೂಡು, ಬೇಲೂರು, ಹೊಳೆನರಸೀಪುರ ತಾಲ್ಲೂಕಿನಲ್ಲಿ ತಲಾ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ.

ಕೋವಿಡ್‌ ಬಾಧಿತರ ಜತೆ ಪ್ರಾರ್ಥಮಿಕ ಸಂಪರ್ಕ ಹೊಂದಿದವರು, ಆರೋಗ್ಯ ಕೇಂದ್ರದ ಸಿಬ್ಬಂದಿ, ಕೆಎಸ್‌ಆರ್‌ಟಿಸಿ ಚಾಲಕ, ಬೆಂಗಳೂರು, ಹೈದರಾಬಾದ್‌, ಭೋಪಾಲ್‌ , ಮಂಡ್ಯ ಪ್ರಯಾಣದ ಹಿನ್ನೆಲೆ, ಶೀತ ಜ್ವರ ಮಾದರಿಯ ಅನಾರೋಗ್ಯ, ಉಸಿರಾಟದ ತೊಂದರೆ ಇರುವವರಿಗೆ ಕೋವಿಡ್‌ ದೃಢಪಟ್ಟಿದೆ. ಅರಸೀಕೆರೆಯ ವ್ಯಕ್ತಿಗೆ ಸೋಂಕಿನ ಮೂಲ ಪತ್ತೆ ಮಾಡಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾಧಿಕಾರಿ ಡಾ.ಸತೀಶ್‌ ಕುಮಾರ್‌ ತಿಳಿಸಿದರು.

ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶೀತ ಜ್ವರ ಮಾದರಿಯ ಅನಾರೋಗ್ಯ, ತೀವ್ರ ಊಸಿರಾಟದ ತೊಂದರೆ, ಶೀತ, ನೆಗಡಿ, ಕೆಮ್ಮು ಲಕ್ಷಣಗಳು ಇದ್ದರೆ ಹಿಮ್ಸ್‌, ಸಮುದಾಯ ಆರೋಗ್ಯ ಕೇಂದ್ರ ಅಥವಾ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು. ಮಾಸ್ಕ್‌ ಧರಿಸಿ, ಅಂತರ ಪಾಲನೆ ಮಾಡಬೇಕು. ಸಭೆ, ಸಮಾರಂಭಗಳಿಂದ ದೂರ ಇರಬೇಕು ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT