24313 ಹೆಕ್ಟೇರ್ ಕೃಷಿ ಬೆಳೆ ಹಾನಿ; ಅರಸೀಕೆರೆ, ಚನ್ನರಾಯಪಟ್ಟಣ, ಬೇಲೂರು ಬರಪೀಡಿತ

7

24313 ಹೆಕ್ಟೇರ್ ಕೃಷಿ ಬೆಳೆ ಹಾನಿ; ಅರಸೀಕೆರೆ, ಚನ್ನರಾಯಪಟ್ಟಣ, ಬೇಲೂರು ಬರಪೀಡಿತ

Published:
Updated:
Deccan Herald

ಹಾಸನ: ಮಳೆಯ ಅಭಾವದ ಹಿನ್ನೆಲೆಯಲ್ಲಿ ಜಿಲ್ಲೆಯ ಅರಸೀಕೆರೆ, ಚನ್ನರಾಯಪಟ್ಟಣ ಹಾಗೂ ಬೇಲೂರು ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದೆ.

ಈ ತಾಲ್ಲೂಕುಗಳಲ್ಲಿ ಮೊಬೈಲ್ ಆ್ಯಪ್ ಮುಖಾಂತರ ಹಾನಿಯಾಗಿರುವ ಬೆಳೆಗಳ ಛಾಯಚಿತ್ರ ತೆಗೆದು ಗ್ರೌಂಡ್ ಟ್ರೋತಿಂಗ್ ಮೂಲಕ ಬೆಳೆ ನಷ್ಟ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 24313 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆಗಳು ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.

ಕುಡಿಯುವ ನೀರು ಸರಬರಾಜು ಸಂಬಂಧ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ 9 ಹಾಗೂ ಬೇಲೂರು ತಾಲ್ಲೂಕಿನ 2 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಅರಸೀಕೆರೆ ತಾಲ್ಲೂಕಿನ 17 ಹಾಗೂ ಬೇಲೂರು ತಾಲ್ಲೂಕಿನ 4 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಜಿಲ್ಲೆಯಲ್ಲಿ ಜಾನುವಾರುಗಳಿಗೆ ಒಟ್ಟು 652921 ಟನ್ ಮೇವು ಲಭ್ಯವಿದ್ದು, ಮುಂದಿನ 25 ವಾರ ನಿಭಾಯಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !