ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಬೂಜಿ ಭವನಕ್ಕೆ ₹ 3.5 ಕೋಟಿ ಅನುದಾನ

ಶೀಘ್ರವೇ ತಾಲ್ಲೂಕು ಹಾಗೂ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಆರಂಭ: ಪ್ರೀತಂ
Last Updated 5 ಏಪ್ರಿಲ್ 2022, 14:47 IST
ಅಕ್ಷರ ಗಾತ್ರ

ಹಾಸನ: ‘ನಗರದಲ್ಲಿ ಡಾ.ಬಾಬು ಜಗ ಜೀವನ್ ರಾಂ ಭವನ ನಿರ್ಮಾಣಕ್ಕೆ ₹ 3.5 ಕೋಟಿ ಅನುದಾನ ನೀಡಲಾಗಿದೆ’ ಎಂದು ಶಾಸಕ ಪ್ರೀತಂ ಜೆ.ಗೌಡ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ನಗರ ಸಭೆಆಶ್ರಯದಲ್ಲಿ ಮಂಗಳವಾರ ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿಡಾ.ಬಾಬು ಜಗಜೀವನ್ ರಾಂ 115ನೇ ಜನ್ಮ ದಿನಾಚರಣೆಯಲ್ಲಿ ಅವರು ಮಾತನಾಡಿದರು.

‘ಕೆಲವೇ ದಿನಗಳಲ್ಲಿ ತಾಲ್ಲೂಕು ಕಚೇರಿ ಹಾಗೂ ಜಿಲ್ಲಾಧಿಕಾರಿ ಕಚೇರಿಕಟ್ಟಡ ನಿರ್ಮಾಣ ಕಾರ್ಯ ಆರಂಭಗೊಳ್ಳಲಿದೆ.
ಯುವಕರಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಸ್ವಾವಲಂಬಿಗಳಾಗಿ ಬದುಕಲು ಮಾನಸಿಕ ಹಾಗೂ ದೈಹಿಕವಾಗಿ ಸದೃಢರನ್ನಾಗಿ ಮಾಡಬೇಕು. ಜಿಲ್ಲಾಧಿಕಾರಿಕಚೇರಿ ಎದುರು ಇರುವ ಡಾ.ಬಿ.ಆರ್ ಅಂಬೇಡ್ಕರ್ ಪ್ರತಿಮೆಯ ಮಾದರಿಯಲ್ಲೇತಾಲ್ಲೂಕು ಕಚೇರಿಯ ಎದುರು ಡಾ. ಬಾಬು ಜಗಜೀವನ್ ರಾಂ ಅವರ ಕಂಚಿನಪ್ರತಿಮೆಯನ್ನು ಕಾನೂನಾತ್ಮಕವಾಗಿ ನಿರ್ಮಿಸಲಾಗುವುದು’ ಎಂದು ಭರವಸೆನೀಡಿದರು.

ಜಿಲ್ಲಾಧಿಕಾರಿ ಆರ್. ಗಿರೀಶ್ ಮಾತನಾಡಿ, ‘ಶಿಕ್ಷಣವೇ ಶಕ್ತಿ ಎಂದು ನಂಬಿಮಹನೀಯರು ಸಾರ್ಥಕ ಜೀವನ ನಡೆಸಿದ್ದಾರೆ. ಅವರಂತೆ ಶಿಕ್ಷಣಕ್ಕೆ ಹೆಚ್ಚಿನಆದ್ಯತೆ ನೀಡಬೇಕು. ಬಾಬೂಜಿಪುತ್ಥಳಿ ಸ್ಥಾಪನೆಗೆ ಜಾಗ ಕಲ್ಪಿಸಿ ಕೊಡಲಾಗುವುದು’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಾಂತರಾಜುಮಾತನಾಡಿ, ‘ಬಾಬೂಜಿ ಅವರು ಕೈಗೊಂಡ ಅನೇಕ ಕಾರ್ಯಗಳು ದಕ್ಷ ಸಮಾಜನಿರ್ಮಾಣಕ್ಕೆ ಸಹಕಾರಿಯಾಗಿದ್ದು, ಅವರು ನಾಡಿನ ಕಣ್ಮಣಿಯಾಗಿದ್ದಾರೆ. ರಾಜಕೀಯ ವ್ಯಕ್ತಿಯಾಗಿ ರಾಷ್ಟ್ರದ ಬದಲಾವಣೆಯನ್ನು ಬಯಸಿದವರಲ್ಲಿ ಅವರುಮೊದಲಿಗರು. ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣಒದಗಿಸುವಲ್ಲಿ ಅವರ ಪಾತ್ರ ಪ್ರಮುಖವಾದದ್ದು. ರೈತರು, ಕಾರ್ಮಿಕರು ಹಾಗೂ ಶೋಷಿತರ ಅಭಿವೃದ್ಧಿಗಾಗಿ ಶ್ರಮಿಸಿದವರು’ ಎಂದು ನುಡಿದರು.

ಅಂತರ ಜಾತಿ ವಿವಾಹವಾದ ದಂಪತಿಗಳಿಗೆ ಪ್ರೋತ್ಸಾಹ ಧನ ಬಾಂಡ್ ವಿತರಣೆಹಾಗೂ ಸಮಾಜದಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಚಿಂತಕ ಗುರುಪ್ರಸಾದ್ ಉಪನ್ಯಾಸ ನೀಡಿದರು. ಸಮಾಜಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಎಚ್.ವಿ.ಮಂಜುನಾಥ್, ಸಮುದಾಯದಮುಖಂಡರಾದ ಎಚ್.ಪಿ. ಶಂಕರ್ ರಾಜ್, ನಗರಸಭೆ ಪೌರಾಯುಕ್ತ ಸಿ.ಆರ್ . ಪರಮೇಶ್ವರಪ್ಪ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈ. ಕೃಷ್ಣೇಗೌಡ,ಶಿವಮ್ಮ ಹಾಜರಿದ್ದರು.

ಬಾಬೂಜಿ ಜಯಂತಿಯ ಅಂಗವಾಗಿ ಆಯೋಜಿಸಿದ ಮೆರವಣಿಗೆಯನ್ನುಜಿಲ್ಲಾಧಿಕಾರಿ ಆರ್. ಗಿರೀಶ್ ಚಾಲನೆ ನೀಡಿದರು. ಮೆರವಣಿಗೆ ನಗರದ ಪ್ರಮುಖಬೀದಿಗಳಲ್ಲಿ ಸಂಚರಿಸಿತು. ಡೊಳ್ಳು ಕುಣಿತ ಹಾಗೂ ವೀರಗಾಸೆ ಕುಣಿತಗಳು ಸಾರ್ವಜನಿಕರ ಗಮನ ಸೆಳೆದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT