ಶುಕ್ರವಾರ, ಮೇ 14, 2021
27 °C

ಹಾಸನ: ಒಂದೇ ದಿನ 411 ಮಂದಿಗೆ ಕೊರೊನಾ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಜಿಲ್ಲೆಯಲ್ಲಿ ಒಂದೇ ದಿನ ಮಂಗಳವಾರ 411 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ವರೆಗೆ 32,676 ಮಂದಿಗೆ ಸೋಂಕು ದೃಢಪಟ್ಟಿದೆ.

2,225 ಸಕ್ರಿಯ ಪ್ರಕರಣಗಳ ಪೈಕಿ 23 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಂಗಳವಾರ ಬಿಡುಗಡೆಯಾದ 88 ಮಂದಿ ಸೇರಿದಂತೆ ಈವರೆಗೆ 29,947 ಜನರ ಆರೋಗ್ಯದಲ್ಲಿ ಚೇತರಿಕೆಯಾಗಿದೆ. ಕಾಯಿಲೆಯಿಂದ ಮೃತಪಟ್ಟವರ ಸಂಖ್ಯೆ 504 ತಲುಪಿದೆ.

ಹೊಸದಾಗಿ ಹಾಸನ 170, ಅರಕಲಗೂಡು 21, ಅರಸೀಕೆರೆ 74, ಹೊಳೆನರಸೀಪುರ 21, ಚನ್ನರಾಯಪಟ್ಟಣ 30, ಸಕಲೇಶಪುರ 22, ಆಲೂರು 34, ಅರಕಲಗೂಡು 21, ಬೇಲೂರು 36 ಹಾಗೂ ಇತರೆ ಜಿಲ್ಲೆಯ 3 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ. ಸತೀಶ್ ಕುಮಾರ್‌ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು