ಸೋಮವಾರ, ಆಗಸ್ಟ್ 8, 2022
23 °C
301 ಜನರಿಗೆ ಕೊರೊನಾ ಸೋಂಕು, ವ್ಯದ್ಧ ಸಾವು

ಹಾಸನ: ಒಂದೇ ದಿನ 445 ಜನ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಒಂದೇ ದಿನ 445 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ 8161 ಜನರು ಗುಣಮುಖರಾಗಿದ್ದಾರೆ. ಶುಕ್ರವಾರ ಹೊಸದಾಗಿ 301 ಕೋವಿಡ್‌ ಪ್ರಕರಣಗಳು ವರಿದಯಾಗಿದ್ದು, ಸೋಂಕಿತರ ಸಂಖ್ಯೆ 11,179ಕ್ಕೆ ಏರಿಕೆಯಾಗಿದೆ.

ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಸಕಲೇಶಪುರ ತಾಲ್ಲೂಕಿನ 66 ವರ್ಷದ ಪುರುಷ ಚಿಕಿತ್ಸೆಗೆ ಸ್ಪಂದಿಸಲಿಲ್ಲ.
ಕೋವಿಡ್‌ನಿಂದ ಈವರೆಗೆ 242 ಜನರು ಮೃತಪಟ್ಟಿದ್ದಾರೆ. ಸರ್ಕಾರ ನಿಯಮಾನುಸಾರ ಅಂತ್ಯ ಸಂಸ್ಕಾರ
ನೆರವೇರಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್‌ ತಿಳಿಸಿದರು.

ಜಿಲ್ಲೆಯಲ್ಲಿ 2,776 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಕೇರ್‌ ಸೆಂಟರ್‌ ಹಾಗೂ ಹೋಂ
ಐಸೋಲೇಷನ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 55 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸದಾಗಿ ಅರಸೀಕೆರೆ 49, ಚನ್ನರಾಯಪಟ್ಟಣ 11, ಆಲೂರು 14, ಹಾಸನ 124, ಹೊಳೆನರಸೀಪುರ 10, ಅರಕಲಗೂಡು 49, ಬೇಲೂರು 11 , ಸಕಲೇಶಪುರ 2 ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಸೋಂಕು ದೃಢಪಟ್ಟಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.