ಚನ್ನರಾಯಪಟ್ಟಣ: ಬೀದಿ ನಾಯಿ ಕಡಿತದಿಂದ ಸಣ್ಣಪುಟ್ಟ ಗಾಯಗೊಂಡವರಿಗೆ ಚಿಕಿತ್ಸಾ ವೆಚ್ಚಕ್ಕೆ ₹5 ಸಾವಿರ ಪರಿಹಾರ ನೀಡಲಾಗುವುದು. ಅದೇ ರೀತಿ ಬೀದಿ ನಾಯಿ ಕಡಿತದಿಂದ ವ್ಯಕ್ತಿ ಮೃತಪಟ್ಟರೆ ಅವರ ಕುಟುಂಬದವರಿಗೆ ₹5 ಲಕ್ಷ ಪರಿಹಾರ ನೀಡಲು ಅವಕಾಶ ಇದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ.ಆರ್. ಹರೀಶ್ ಹೇಳಿದರು.

ತಾಲ್ಲೂಕು ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಶಾಸಕ ಸಿ.ಎನ್. ಬಾಲಕೃಷ್ಣ ಅಧ್ಯಕ್ಷತೆಯಲ್ಲಿ ಏರ್ಪಡಿಸಿದ್ದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿನಾಯಿ ಕಡಿತದಿಂದ ನೊಂದವರಿಗೆ ಪರಿಹಾರ ನೀಡಲಾಗುವುದು. ಇದಕ್ಕೆ ಸಂಬಂಧಿಸಿದಂತೆ ದಾಖಲೆಗಳಿರಬೇಕು. ಘಟನೆ ಸಂಭವಿಸಿದ 48 ಗಂಟೆಗಳಲ್ಲಿ ಪಿಡಿಒಗಳು ವರದಿ ಮಾಡಬೇಕು. ಈಗಾಗಲೇ ಎನ್. ಬಿಂಡೇನಹಳ್ಳಿಯಲ್ಲಿ ಬೀದಿ ನಾಯಿ ಕಡಿತದಿಂದ ವ್ಯಕ್ತಿ ಮೃತಪಟ್ಟಿದ್ದು, ಅವರ ಕುಟುಂಬವರ್ಗದವರಿಗೆ ಪರಿಹಾರ ನೀಡಲು ಕ್ರಮವಹಿಸಲಾಗುತ್ತಿದೆ ಎಂದರು.

ಬೀದಿನಾಯಿಗಳಿಗೆ ಸಂತಾನಶಕ್ತಿಹರಣ ಶಸ್ತ್ರ ಚಿಕಿತ್ಸೆ ಮಾಡಬೇಕು ಎಂದು ಹೇಳಿದರು. ಕಳೆದ ಡಿಸೆಂಬರ್ನಲ್ಲಿ ನಾಯಿಕಡಿತದಿಂದ ಗಾಯಗೊಂಡ 267 ಮಂದಿಗೆ ಚನ್ನರಾಯಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಚನ್ನರಾಯಪಟ್ಟಣ ತಾಲ್ಲೂಕು ಸೇರಿ ಪಕ್ಕದ ಕೆ.ಆರ್. ಪೇಟೆ ತಾಲ್ಲೂಕಿನ ಜನತೆ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಬಿ.ಆರ್. ಯುವರಾಜ್ ತಿಳಿಸಿದರು.

ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ, ಪಟ್ಟಣದ ಮಾಧ್ಯಮಿಕ ಶಾಲಾ ಆವರಣದಲ್ಲಿ ಜ. 26ರ ನಂತರ ಸರ್ಕಾರಿ ಕಾರ್ಯಕ್ರಮ ಹೊರತು ಪಡಿಸಿ ಖಾಸಗಿ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು. ಮಾಧ್ಯಮಿಕ ಶಾಲಾ ಆವರಣದಲ್ಲಿರುವ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇದು ಅನಿವಾರ್ಯ ಎಂದು ತಿಳಿಸಿದರು.

ಪೊಲೀಸ್ ಇನ್ಸ್ಪೆಕ್ಟರ್ ಎಸ್.ಎಂ. ರಘುಪತಿ ಮಾತನಾಡಿ, 2023ರಲ್ಲಿ 11 ಪೋಕ್ಸೊ ಪ್ರಕರಣ ದಾಖಲಾಗಿತ್ತು. ಕಳೆದ ವರ್ಷ 3 ಪ್ರಕರಣ ದಾಖಲಾಗಿದೆ. ಶಾಲೆಗಳಲ್ಲಿ ಜಾಗೃತಿ ಮೂಡಿಸಿದ ಪರಿಣಾಮ ಪೋಕ್ಸೋ ಪ್ರಕರಣಗಳು ಕಡಿಮೆಯಾಗುತ್ತಿದೆ. ಇನ್ನಷ್ಟು ಜಾಗೃತಿ ಮೂಡಿಸುವ ಮೂಲಕ ಅದನ್ನು ಶೂನ್ಯಕ್ಕೆ ತರಬೇಕಿದೆ ಎಂದರು.
ಕೆಡಿಪಿ ನಾಮನಿರ್ದೇಶನ ಸದಸ್ಯ ಕೆ.ಟಿ. ಮಹೇಶ್ ಮಾತನಾಡಿ, ಎಲ್ಲಾ ಖಾಸಗಿ ಶಾಲಾ ಬಸ್ಗಳ ದಾಖಲೆಗಳನ್ನು ಪರಿಶೀಲಿಸಬೇಕು. ಚಾಲಕರ ಹಿನ್ನಲೆಯನ್ನು ತಿಳಿದುಕೊಂಡು ನೇಮಕ ಮಾಡಿಕೊಳ್ಳಬೇಕು. ಕಳೆದ ಸಭೆಯಲ್ಲಿ ಈ ವಿಷಯದ ಕುರಿತು ಪ್ರಸ್ತಾಪಿಸಿದ್ದೆ ಎಂದು ಹೇಳಿದರು.