ಮಂಗಳವಾರ, ಜುಲೈ 5, 2022
24 °C

ಅಭಿವೃದ್ಧಿಗೆ ಸಂದ ಗೆಲುವು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ‘ಅಭಿವೃದ್ಧಿ ಆಧಾರದಲ್ಲಿ ಚುನಾವಣೆ ಗೆಲ್ಲಬಹುದು ಎನ್ನುವುದಕ್ಕೆ ಈ ಬಾರಿಯ ಉತ್ತರ ಪ್ರದೇಶ ಚುನಾವಣೆ ಸಾಕ್ಷಿ’ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ತಾಲ್ಲೂಕಿನ ಕಾರೆಕೆರೆ ಕೃಷಿ ಕಾಲೇಜಿನ ಆವರಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಉತ್ತರ ಪ್ರದೇಶದಲ್ಲಿ ಆರು ತಿಂಗಳು ವಾಸ್ತವ್ಯ ಮಾಡಿ, ಪ್ರತಿ ಹಳ್ಳಿ, ವಿಧಾನಸಭಾ ಕ್ಷೇತ್ರಗಳಿಗೂ ಭೇಟಿ ನೀಡಿದ್ದೇನೆ. ಇಷ್ಟು ವರ್ಷ ಉತ್ತರ ಪ್ರದೇಶದಲ್ಲಿ ಜಾತಿ ಮತ್ತು ಧರ್ಮದ ಆಧಾರದಲ್ಲಿ ಚುನಾವಣೆ ನಡೆಯುತ್ತಿತ್ತು. ಆದರೆ, ಮೊದಲ ಬಾರಿಗೆ ಅಭಿವೃದ್ಧಿ ಆಧಾರದಲ್ಲಿ ಚುನಾವಣೆ ನಡೆದು, ಜನರು ಬಿಜೆಪಿ ಬೆಂಬಲಿಸಿದ್ದಾರೆ’ ಎಂದು ತಿಳಿಸಿದರು.

‘ಅತಿವೃಷ್ಟಿ, ಅನಾವೃಷ್ಟಿ ಸಂದರ್ಭದಲ್ಲಿ ಬೆಳೆ ಪರಿಹಾರ ರೈತರಿಗೆ ಅನುಕೂಲವಾಗುತ್ತದೆ. ವಿಮಾ ಕಂಪನಿ ಆಯ್ಕೆ ಮಾಡಿಕೊಳ್ಳುವ ಅಧಿಕಾರ ಆಯಾ ರಾಜ್ಯ ಸರ್ಕಾರಕ್ಕೆ ಬಿಟ್ಟದ್ದು. ಕಂಪನಿ ಸರಿಯಾಗಿ ಕಾರ್ಯ ನಿರ್ವಹಿಸದಿದ್ದರೆ, ಅದನ್ನು ಕೈಬಿಟ್ಟು ಉತ್ತಮ ಕಂಪನಿಗೆ ನೀಡುವ ಅವಕಾಶ ರಾಜ್ಯ ಸರ್ಕಾರಕ್ಕೆ ಇದೆ’ ಎಂದು ಸ್ಪಷ್ಟಪಡಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು