ನುಗ್ಗೇಹಳ್ಳಿ: ತಾಲೂಕಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಸಲುವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗಳಲ್ಲಿ 50 ಸ್ಮಾರ್ಟ್ ಕ್ಲಾಸ್ ಪ್ರಾರಂಭಿಸಲಾಗಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು.

ಹೋಬಳಿಯ ಹೆಬ್ಬಾಳಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ವತಿಯಿಂದ ನಿರ್ಮಾಣ ಮಾಡಲಾಗಿದ್ದ ನೂತನ ಅಡುಗೆ ಕೋಣೆ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಅವರು ಮಾತನಾಡಿದರು.

‘ಹೆಬ್ಬಳಲು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ತಾಲ್ಲೂಕಿಗೆ ಮಾದರಿಯಾಗಿದ್ದು ಶಾಲೆ ಆವರಣದಲ್ಲಿ ಹಸಿರು ವನ ಸೇರಿದಂತೆ ಸ್ವಚ್ಛತೆ ಹಾಗೂ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮತ್ತು ಇಲ್ಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ಕಳೆದ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನೂರಕ್ಕೆ 100 ಫಲಿತಾಂಶ ಬಂದಿದೆ. ಪೋಷಕರು ಖಾಸಗಿ ಶಾಲೆಗಳ ವ್ಯಾಮೋಹ ಬಿಟ್ಟು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸಿ’ ಎಂದು ಮನವಿ ಮಾಡಿದರು.

ಕ್ಷೇತ್ರ ಸಮನ್ವಯ ಅಧಿಕಾರಿ ಅನಿಲ್ ಮಾತನಾಡಿ, ಸರ್ಕಾರಿ ಶಾಲೆಗಳ ಉಳಿವಿಗೆ ಪ್ರತಿಯೊಬ್ಬರೂ ಕೈಜೋಡಿಸುವುದರಿಂದ ಶಿಕ್ಷಣ ವ್ಯಾಪಾರಿಕರಣವಾಗುವುದನ್ನು ತಡೆಯಬಹುದಾಗಿದೆ ಎಂದರು.

ಶಾಲೆಯ ಮುಖ್ಯ ಶಿಕ್ಷಕ ಸಿದ್ದರಾಜು ಮಾತನಾಡಿ, ಶಾಲೆಯ ಅಭಿವೃದ್ಧಿ ಕೆಲಸಗಳಿಗೆ ಶಾಸಕರು ಹೆಚ್ಚಿನ ಸಹಕಾರ ನೀಡುತ್ತಾ ಬಂದಿದ್ದಾರೆ ಬಾಕಿ ಉಳಿದಿರುವ ಕೊಠಡಿಗಳ ನವೀಕರಣಕ್ಕೆ ತುರ್ತಾಗಿ ₹10 ಲಕ್ಷ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು.

ಅಕ್ಕನಹಳ್ಳಿ ಕೂಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್ಎನ್ ರವಿಕುಮಾರ್, ಎಪಿಎಂಸಿ ಮಾಡಿ ಅಧ್ಯಕ್ಷ ದೊರೆಸ್ವಾಮಿ, ನಾಗರಿಕ ವೇದಿಕೆ ಅಧ್ಯಕ್ಷ ತೋಟಿ ನಾಗರಾಜ್, ಅಕ್ಕನಹಳ್ಳಿ ಹಾಗೂ ನುಗ್ಗೇಹಳ್ಳಿ ಕೃಷಿ ಪತ್ತಿನ ಅಧ್ಯಕ್ಷರಾದ ವಿಠಲ್, ಸೋಸಲಗೆರೆ ಮಧು, ಎಸ್ ಡಿ ಎಂ ಸಿ ಅಧ್ಯಕ್ಷ ಗೋಪಾಲ್, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಉಮಾ ಶಂಕರ್, ಹೋಬಳಿ ಶಿಕ್ಷಣ ಸಂಯೋಜಕ ಕರಿಯಪ್ಪ ಗೌಡ, ಬಿ ಆರ್ ಪಿ ಶ್ರೀಕಾಂತ್, ತಾಲ್ಲೂಕು ಸಿಆರ್ಪಿ ಸಂಘದ ಅಧ್ಯಕ್ಷ ಎಚ್.ಟಿ.ಮಂಜೇಗೌಡ, ಅಕ್ಕನಹಳ್ಳಿ ಕ್ಲಸ್ಟರ್ ಸಿಆರ್ಪಿ ಅಶೋಕ್ ಸುಧನ್, ಹೆಬ್ಬಾಳಲು ಪ್ರೌಢಶಾಲೆ ಮುಖ್ಯ ಶಿಕ್ಷಕಿ ಲೀಲಾ, ಗುತ್ತಿಗೆದಾರರಾದ ವೆಂಕಟೇಶ್, ಗ್ರಾಪಂ ಸದಸ್ಯ ಹೊನ್ನೇಗೌಡ, ಮುಖಂಡರಾದ ಗೌಡಪ್ಪ, ಎಂ.ಎಸ್.ಸುರೇಶ್, ಪುಟ್ಟಸ್ವಾಮಿ, ಚಿನ್ನೇನಹಳ್ಳಿ ರಾಮು, ಡೈರಿ ವೇಣು, ಮುಳಕೆರೆ ಬಾಬು, ಚೇತನ್, ಶಿಕ್ಷಕರಾದ ರೋಜ್ ಮೇರಿ ಸೇರಿದಂತೆ ಮಕ್ಕಳ ಪೋಷಕರು ಹಾಗೂ ಗ್ರಾಮಸ್ಥರು ಹಾಜರಿದ್ದರು.

ಅನುದಾನ ಬಿಡುಗಡೆಗಾಗಿ ಸಚಿವರಿಗೆ ಒತ್ತಾಯ:

‘ಸುಮಾರು ₹5.29 ಲಕ್ಷ ವೆಚ್ಚದಲ್ಲಿ ನೂತನ ಅಡುಗೆ ಕೋಣೆಯನ್ನು ನಿರ್ಮಾಣ ಮಾಡಲಾಗಿದ್ದು ಇದರ ಜೊತೆಗೆ 3 ಕೊಠಡಿಗಳ ನವೀಕರಣಕ್ಕೆ ಅನುದಾನ ನೀಡಲಾಗಿದೆ. ಮುಂಬರುವ ದಿನಗಳಲ್ಲಿ ನವೀಕರಣಗೊಂಡಿರುವ ಕೊಠಡಿಗಳ ಪಕ್ಕದಲ್ಲಿ ಜಗಲಿ ನಿರ್ಮಾಣಕ್ಕೆ ಅನುದಾನ ನೀಡಲಾಗುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷಗಳಾದರೂ ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆಗಳ ಹೊಸ ಕಟ್ಟಡ ಹಾಗೂ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ನೀಡಿಲ್ಲ. ಈ ಬಗ್ಗೆ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರಿಗೆ ಮನವಿ ಸಲ್ಲಿಸಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯವನ್ನು ಕೂಡ ಮಾಡಲಾಗಿದೆ’ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.