ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಂದೇ ದಿನ 505 ಜನರಿಗೆ ಸೋಂಕು ದೃಢ

ಮತ್ತೆ 3 ಸಾವು, 422 ಜನ ಗುಣಮುಖ
Last Updated 12 ಅಕ್ಟೋಬರ್ 2020, 8:25 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಒಂದೇ ದಿನ ಹೊಸದಾಗಿ 505 ಜನರಿಗೆ ಕೊರೊನಾ ಸೋಂಕು ದೃಢ ಪಟ್ಟಿದ್ದು, ಸೋಂಕಿತರ ಸಂಖ್ಯೆ 21,316ಕ್ಕೆ ಏರಿಕೆಯಾಗಿದೆ. ಜೊತೆಗೆ ಕೋವಿಡ್‌ನಿಂದ ಮತ್ತೆ 3 ಮಂದಿ ಮೃತರಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 375ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ 4,190 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರ, ಹೋಂ ಐಸೋಲೆಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭಾನುವಾರ ಬಿಡುಗಡೆಯಾದ 422 ಜನ ಸೇರಿದಂತೆ ಈವರೆಗೆ 16,751 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 46 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೊರೊನಾ ಸೋಂಕು ದೃಢಪಟ್ಟ, ಉಸಿರಾಟದ ಸಮಸ್ಯೆಯಿಂದ ಜಿಲ್ಲಾ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿದ್ದ ಹಾಸನ, ಅರಸೀಕೆರೆ, ಬೇಲೂರು ತಾಲ್ಲೂಕಿನ ತಲಾ ಒಬ್ಬರು ಚಿಕಿತ್ಸೆಗೆ ಸ್ಪಂದಿಸದೆಮೃತಪಟ್ಟಿದ್ದಾರೆ.

ಹೊಸದಾಗಿ ಪತ್ತೆಯಾದ 505 ಕೊರೊನಾ ಸೋಂಕು ಪ್ರಕರಣಗಳಲ್ಲಿ ಅರಸೀಕೆರೆ 72, ಚನ್ನರಾಯಪಟ್ಟಣ 81, ಆಲೂರು 11, ಹಾಸನ 186, ಹೊಳೆನರಸೀಪುರ 45, ಅರಕಲಗೂಡು 48, ಬೇಲೂರು 30, ಸಕಲೇಶಪುರ 24 ಹಾಗೂ ಇತರ ಜಿಲ್ಲೆಯ 8 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT