ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಬೇಕು

ಚನ್ನರಾಯಪಟ್ಟಣ: ಶಿಕ್ಷಕರು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಆದಿಚುಂಚನಗಿರಿ ಬಿ.ಇಡಿ ಕಾಲೇಜು ಪ್ರಾಂಶುಪಾಲ ಬಿ. ಕೃಷ್ಣ ಹೇಳಿದರು.
ಪಟ್ಟಣದಲ್ಲಿ ಶಾಲಿನಿ ವಿದ್ಯಾಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಕಷ್ಟು ತಯಾರಿಯೊಂದಿಗೆ ತರಗತಿಗೆ ತೆರಳಿ ಪಾಠ ಮಾಡಬೇಕು. ಸಮಯಪ್ರಜ್ಞೆ ಇರಬೇಕು. ವಿದ್ಯಾರ್ಥಿಗಳನ್ನು ಉತ್ತಮ ನಾಗರಿಕರನ್ನಾಗಿ ಮಾಡುವ ಹೊಣೆ ಶಿಕ್ಷಕರ ಮೇಲಿದೆ. ಆ ಮೂಲಕ ವೃತ್ತಿಗೌರವವನ್ನು ಎತ್ತಿ ಹಿಡಿದು ವಿದ್ಯಾರ್ಥಿಗಳ ಪ್ರೀತಿಗೆ ಪಾತ್ರರಾಗುತ್ತೀರಿ ಎಂದರು.
ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸಿ.ಕೆ.ಕೃಷ್ಣೇಗೌಡ ಮಾತನಾಡಿ, ಪಠ್ಯದ ಜೊತೆ ಮಾನವೀಯ ಮೌಲ್ಯವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಬೇಕು ಎಂದು ತಿಳಿಸಿದರು. ಮಕ್ಕಳ ಸಾಹಿತ್ಯ ಪರಿಷತ್ತು ಪದಾಧಿಕಾರಿ ಎ.ಎಂ. ಜಯರಾಂ ಮಾತನಾಡಿದರು.
ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕೃಷ್ಣೇಗೌಡ, ಶಾಲೆಯ ಶಿಕ್ಷಕರಾದ ಹೇಮಲತಾ, ಲತಾ, ಪದ್ಮಶ್ರೀ ಅವರನ್ನು ಸನ್ಮಾನಿಸಲಾಯಿತು.
ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸಿ.ಎನ್. ಅಶೋಕ್, ಮುಖ್ಯ ಶಿಕ್ಷಕಿ ಮಮತಾ, ಶಿಕ್ಷಕ ರಮೇಶ್ ಇತರರು ಇದ್ದರು.
ಬರಹ ಇಷ್ಟವಾಯಿತೆ?
0
0
0
0
0
0 comments
View All