ಬುಧವಾರ, 4 ಅಕ್ಟೋಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ | ಉದ್ಯೋಗ ಮೇಳ: 600 ವಿದ್ಯಾರ್ಥಿಗಳ ಆಯ್ಕೆ

Published 2 ಜೂನ್ 2023, 13:37 IST
Last Updated 2 ಜೂನ್ 2023, 13:37 IST
ಅಕ್ಷರ ಗಾತ್ರ

ಹಾಸನ: ನಗರದ ಎ.ವಿ.ಕಾಂತಮ್ಮ ಮಹಿಳಾ ಕಾಲೇಜಿನಲ್ಲಿ ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ ಘಟಕ ಮತ್ತು ರ‍್ಯಾಂಡ್‌ಸ್ಟ್ಯಾಡ್‌ ಪ್ರೈವೇಟ್‌ ಲಿಮಿಟೆಡ್‌ ವತಿಯಿಂದ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿತ್ತು.  

ಉದ್ಯೋಗ ಮೇಳದಲ್ಲಿ ಎವಿಕೆ ಕಾಲೇಜಿನ ವಿದ್ಯಾರ್ಥಿನಿಯರು ಒಳಗೊಂಡಂತೆ ನಗರದ ಹಾಗೂ ವಿವಿಧ ತಾಲ್ಲೂಕಿನ ಪದವಿ ಕಾಲೇಜು, ಪಾಲಿಟೆಕ್ನಿಕ್ ಕಾಲೇಜು, ಐಟಿಐ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ 900ಕ್ಕೂ ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಈ ಮೇಳದಲ್ಲಿ 600ಕ್ಕೂ ಅಧಿಕ ವಿದ್ಯಾರ್ಥಿಗಳು ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲೆ ಪ್ರೊ. ಆರ್.ಟಿ. ಪ್ರತಿಮಾದೇವಿ ತಿಳಿಸಿದರು.

ಪದವಿ ಮುಗಿಸಿದ ವಿದ್ಯಾರ್ಥಿಗಳು ತಕ್ಷಣವೇ ಹಾಗೂ ಅಂತಿಮ ಪದವಿಯಲ್ಲಿರುವ ವಿದ್ಯಾರ್ಥಿಗಳು ಪರೀಕ್ಷೆ ಮುಗಿದ ತಕ್ಷಣವೇ ಆಯ್ಕೆ ಪತ್ರವನ್ನು ಪಡೆದು ಕೆಲಸಕ್ಕೆ ಹಾಜರಾಗಬಹುದು ಎಂದು ಕಂಪನಿಯು ಅಧಿಕಾರಿಗಳು ತಿಳಿಸಿದರು.

ಕಾಲೇಜಿನ ಉದ್ಯೋಗ ಮತ್ತು ವೃತ್ತಿ ಮಾರ್ಗದರ್ಶನ ಘಟಕದ ಸಂಚಾಲಕ ಡಾ.ಕೆ.ಎಸ್.ಕುನಾಲ್‍ ಮಾರ್ಗದರ್ಶನ ಹಾಗೂ ಬೆಂಗಳೂರಿನ ರ‍್ಯಾಂಡ್‌ಸ್ಟ್ಯಾಡ್‌ ಕಂಪನಿಯ ಡೆಲಿವೆರಿ ಮ್ಯಾನೇಜರ್ ಕೃಷ್ಣಮೂರ್ತಿ ಎನ್. ಹಾಗೂ ತಂಡದ ನೇತೃತ್ವದಲ್ಲಿ ಉದ್ಯೋಗ ಮೇಳ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT