ಮಂಗಳವಾರ, ಸೆಪ್ಟೆಂಬರ್ 21, 2021
27 °C
ಎಸ್ಸೆಸ್ಸೆಲ್ಸಿ: ಜಿಲ್ಲೆಗೆ ಶೇಕಡಾ 99.66ರಷ್ಟು ಫಲಿತಾಂಶ

9 ವಿದ್ಯಾರ್ಥಿಗಳಿಗೆ 625 ಅಂಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

 

ಹಾಸನ: ಜಿಲ್ಲೆಯ ಒಂಬತ್ತು ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಪಡೆದಿದ್ದಾರೆ.  ಪರೀಕ್ಷೆಗೆ ಹಾಜರಾಗಿದ್ದ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಹಾಸನದ ನಗರದ ಐವರು, ಚನ್ನರಾಯಪಟ್ಟಣ ತಾಲ್ಲೂಕಿನ ಇಬ್ಬರು, ಅರಸೀಕೆರೆಯ ಇಬ್ಬರು ವಿದ್ಯಾರ್ಥಿಗಳು
ಈ ಸಾಧನೆ ಮಾಡಿದ್ದಾರೆ.

ನಗರದ ವಿಜಯ ಇಂಗ್ಲಿಷ್ ಶಾಲೆಯ ಬಿ.ಎಸ್.ಗ್ರೀಷ್ಮಾ, ಎಚ್.ಆರ್.ಉತ್ಸವ್, ದಿಶಾ ಎಸ್.ಜೈನ್,
ಎಸ್.ಟಿ.ಮೀನಾ, ಯುನೈಟೆಡ್ ಪ್ರೌಢಶಾಲೆಯ ಕೆ.ಜೆ.ಈಶಾನ್ಯ, ಚನ್ನರಾಯಪಟ್ಟಣ ತಾಲ್ಲೂಕು ಕಬ್ಬಳಿ
ಬಸವೇಶ್ವರ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಡಿ.ಜೆ.ದೀಪಾ, ಎನ್.ಕೆ.ದೀಕ್ಷಿತಾ ಹಾಗೂ ಅರಸೀಕೆರೆ
ಆದಿಚುಂಚನಗಿರಿ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆಯ ಎಚ್.ಆರ್.ಸುಷ್ಮಿತಾ, ಯು.ಪೂಜಾ ಅವರು 625ಕ್ಕೆ 625
ಅಂಕ ಗಳಿಸಿದ್ದಾರೆ.

ಹಾಸನ ನಗರದ ಎಸ್ಆರ್‌ಎಸ್‌ ಪ್ರಜ್ಞಾ ಶಾಲೆಯ ವಿದ್ಯಾರ್ಥಿ ರೋಹನ್ ಪಿ ಅವರು 625ಕ್ಕೆ 623 ಅಂಕ
ಪಡೆದು ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್‌ ಹಾಗೂ
ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಕೋವಿಡ್ ಆತಂಕದ ನಡುವೆಯೂ ಜುಲೈ 19 ಮತ್ತು 22 ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿತ್ತು.
2019–20ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಹಾಸನ ಜಿಲ್ಲೆ 9ನೇ ಸ್ಥಾನದಲ್ಲಿತ್ತು. ಜಿಲ್ಲೆಗೆ ‘ಎ’
ಗ್ರೇಡ್‌ ಲಭಿಸಿದೆ.

‘ಜಿಲ್ಲೆಯಲ್ಲಿ ಈ ವರ್ಷ ಒಟ್ಟು 20,156 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 67 ಮಂದಿ ಪರೀಕ್ಷೆಗೆ ಗೈರು ಹಾಜರಾಗಿದ್ದರು. ಉಳಿದಂತೆ ಪರೀಕ್ಷೆಗೆ ಹಾಜರಾಗಿದ್ದ 20,089 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಹಾಸನ ಜಿಲ್ಲೆ ಶೇ 99.66 ರಷ್ಟು ಫಲಿತಾಂಶ ಪಡೆದಿದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ಎಸ್‌.ಪ್ರಕಾಶ್‌ ತಿಳಿಸಿದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು