ಮಂಗಳವಾರ, ಜೂನ್ 22, 2021
22 °C

ಹಾಸನ: 635 ಮಂದಿಗೆ ಕೊರೊನಾ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ 635 ಕೋವಿಡ್‌ 19 ಪ್ರಕರಣಗಳು ಪತ್ತೆಯಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಏಳು ಮಂದಿ ಮೃತಪಟ್ಟಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 38,525ಕ್ಕೆ ಏರಿಕೆಯಾಗಿದ್ದು, 31,838 ಜನರ ಆರೋಗ್ಯದಲ್ಲಿ ಚೇತರಿಕೆಯಾಗಿದೆ. 6,124 ಸಕ್ರಿಯ ಪ್ರಕರಣಗಳ ಪೈಕಿ 68 ಜನರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್‌ ಕಾಯಿಲೆಗೆ ಈವರೆಗೆ 563 ಮಂದಿ ಅಸುನೀಗಿದ್ದಾರೆ. ಹಾಸನ ತಾಲ್ಲೂಕಿನಲ್ಲಿ ಅತಿ ಹೆಚ್ಚು ರೋಗಿಗಳು ಸೋಂಕಿನಿಂದ ಮೃತಪಟ್ಟಿದ್ದಾರೆ.‌

ಹೊಸದಾಗಿ ಆಲೂರು ತಾಲ್ಲೂಕು 11, ಅರಕಲಗೂಡು 68, ಅರಸೀಕೆರೆ 64, ಬೇಲೂರು 49, ಚನ್ನರಾಯಪಟ್ಟನ 138, ಹಾಸನ 201, ಹೊಳೆನರಸೀಪುರ 47, ಸಕಲೇಶಪುರ 50, ಇತರೆ ಜಿಲ್ಲೆಯ 7 ಮಂದಿಗೆ ಸೋಂಕು ತಗುಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ.ಸತೀಶ್‌ ತಿಳಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು