ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹ 7 ಲಕ್ಷದ ಚಿನ್ನಾಭರಣ ವಶ

ಬೇಲೂರು, ಹಾಸನ ತಾಲ್ಲೂಕಿನಲ್ಲಿ ಐದು ಮನೆ ಕಳ್ಳತನ: ಇಬ್ಬರ ಬಂಧನ
Last Updated 13 ಅಕ್ಟೋಬರ್ 2021, 14:08 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯ ವಿವಿಧೆಡೆ ನಡೆದಿದ್ದ ಐದು ಮನೆ ಕಳವು ಪ್ರಕರಣ ಭೇದಿಸಿರುವ ಜಿಲ್ಲಾ ಪೊಲೀಸರು ಇಬ್ಬರು
ಆರೋಪಿಗಳನ್ನು ಬಂಧಿಸಿ, ₹ 7 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ವಶಪಡಿಸಿ ಕೊಂಡಿದ್ದಾರೆ.

ಬೇಲೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಮನೆ ಕಳ್ಳತನ ಪ್ರಕರಣದಲ್ಲಿ ಕೋಲಾರ ಜಿಲ್ಲೆಯ ನರಸಾಪುರ ಗ್ರಾಮದ ವ್ಯಕ್ತಿಯನ್ನು ಬಂಧಿಸಿ, 50 ಗ್ರಾಂ ಚಿನ್ನಾಭರಣ, ಎಲ್‌ಇಡಿ ಟಿವಿ ಹಾಗೂ ಶಾಂತಿ ಗ್ರಾಮ ಠಾಣಾ ವ್ಯಾಪ್ತಿಯ ಕರಿಗೌಡನ ಕೊಪ್ಪಲು ಗ್ರಾಮದ ಮಂಜುನಾಥ್‌ ಅವರ ಮನೆ ಕಳ್ಳತನ ಪ್ರಕರಣ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ, ₹ 6 ಲಕ್ಷ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಪೊಲೀಸ್‌ ವರಿಷ್ಠಾಧಿಕಾರಿಆರ್‌.ಶ್ರೀನಿವಾಸಗೌಡ ಹೇಳಿದರು.

ಏ. 17ರಂದು ಕರಿಗೌಡನ ಕೊಪ್ಪಲು ಗ್ರಾಮ ಮಂಜುನಾಥ್ ಅವರ ಮನೆಯ ಮದುವೆ ಸಮಾರಂ ಭಕ್ಕೆ ಬಂದಿದ್ದ ವರಲಕ್ಷ್ಮೀ ಅವರ ಬ್ಯಾಗ್‌ನಲ್ಲಿದ್ದ ₹ 97 ಸಾವಿರ ಮೌಲ್ಯದ ಚಿನ್ನಾಭರಣ ಕಳವಾಗಿತ್ತು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಶಾಂತಿ ಗ್ರಾಮ ಪೊಲೀಸರು, ಅ. 3ರಂದು ಹಾಸನ ರೈಲ್ವೆ ನಿಲ್ದಾಣ ಬಳಿಅನುಮಾನಾಸ್ಪದ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ದಾಗ, ದುದ್ದ ಠಾಣೆಯ 1 ಮತ್ತು ಹಾಸನಬಡಾವಣೆಯ ಎರಡು ಮನೆ ಯಲ್ಲಿ ಕಳವು ಮಾಡಿರುವುದಾಗಿ ಒಪ್ಪಿ ಕೊಂಡಿದ್ದಾನೆ ಎಂದು ವಿವರಿಸಿದರು.

ಅಪರಾಧ ಪ್ರಕರಣಗಳಿಗೆ ಕಡಿವಾಣ ಹಾಕಲು ದೇವಾಲಯ, ಚರ್ಚ್‌, ಮಸೀದಿಗಳಲ್ಲಿ ಸಿಸಿಟಿವಿ ಕ್ಯಾಮೆರಾ
ಅಳವಡಿಸಿ, ಭದ್ರತಾ ಸಿಬ್ಬಂದಿ ನಿಯೋಜಿಸುವಂತೆ ಸಂಬಂಧಪಟ್ಟ ಆಡಳಿತ ಮಂಡಳಿಗೆ ಸೂಚನೆ ನೀಡಲಾಗಿದೆ.

ಈ ಸಂಬಂಧ ಅರಸೀಕೆರೆಯಲ್ಲಿ ಆಂದೋಲನ ನಡೆಸಿದ್ದು, ಏಳು ದೇವಾಲಯಗಳಿಗೆ ಭೇಟಿ ನೀಡಿ ಜಾಗೃತಿ
ಮೂಡಿಸಲಾಗಿದೆ ಎಂದರು.

‘ಸೈಬರ್‌ ಅಪರಾಧ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದೆ. ಆನ್‌ಲೈನ್‌ ನಲ್ಲಿ ಉಚಿತ ಕೊಡುಗೆ ನೀಡುವ ಆಮಿಷಕ್ಕೆ ಬಲಿಯಾಗಿ ಹಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಗ್ಗೆ ಸಾರ್ವಜನಿಕ ರಿಗೆ ಸಾಕಷ್ಟು ಎಚ್ಚರಿಕೆ ನೀಡಿದರೂ ಅಪರಿಚಿತರ ಮಾತಿಗೆ ಮರುಳಾಗಿ ಲಕ್ಷಾಂತರ ರೂಪಾಯಿ ಹಣ ಕಳೆದು ಕೊಳ್ಳುತ್ತಿದ್ದಾರೆ’ ಸಾರ್ವಜನಿಕರು ಎಚ್ಚರದಿಂದ ಇರಿ’ ಎಂದು ಹೇಳಿದರು.

ಗೋಷ್ಠಿಯಲ್ಲಿ ಎಸ್‌ಎಸ್‌ಪಿ ಬಿ.ಎನ್.ನಂದಿನಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT