224 ಕ್ಷೇತ್ರದಲ್ಲಿ 7ನೇ ತರಗತಿವರೆಗೆ ಸಿಬಿಎಸ್‌ಸಿ ಪಠ್ಯಕ್ರಮ ಶಾಲೆ: ರೇವಣ್ಣ

7
ಆರ್ಯ ಈಡಿಗರ ಸಮುದಾಯ ಭವನ ಶಿಲಾನ್ಯಾಸ ಕಾರ್ಯಕ್ರಮ

224 ಕ್ಷೇತ್ರದಲ್ಲಿ 7ನೇ ತರಗತಿವರೆಗೆ ಸಿಬಿಎಸ್‌ಸಿ ಪಠ್ಯಕ್ರಮ ಶಾಲೆ: ರೇವಣ್ಣ

Published:
Updated:
Deccan Herald

ಹಾಸನ: ರಾಜ್ಯದ 224 ಕ್ಷೇತ್ರದಲ್ಲಿಯೂ ಸಿಬಿಎಸ್‌ಸಿ ಪಠ್ಯಕ್ರಮದ 1 ರಿಂದ 7ನೇ ತರಗತಿವರೆಗಿನ ಶಾಲೆಗಳನ್ನು ತೆರೆಯಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಎಚ್.ಡಿ.ರೇವಣ್ಣ ಹೇಳಿದರು.

ಇಲ್ಲಿನ ರವೀಂದ್ರನಗರದಲ್ಲಿ ಜಿಲ್ಲಾ ಆರ್ಯ ಈಡಿಗರ ಸಮಾಜದ ವಿದ್ಯಾರ್ಥಿ ನಿಲಯ ಹಾಗೂ ಸಮುದಾಯ ಭವನ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.

‘ಸಂಸದ ಎಚ್.ಡಿ.ದೇವೇಗೌಡ, ಕುಮಾರಸ್ವಾಮಿ ಅಥವಾ ನಾನಾಗಲೀ ಶಿಕ್ಷಣ ಸಂಸ್ಥೆ ನಡೆಸುತ್ತಿಲ್ಲ. ಬಡ ಮಕ್ಕಳಿಗೆ ಅನುಕೂಲವಾಗಬೇಕು ಅಷ್ಟೇ. ಗ್ರಾಮೀಣ ಪ್ರದೇಶದ ಬಡ ಮಕ್ಕಳಿಗೂ ಉತ್ತಮ ಶಿಕ್ಷಣ ದೊರೆಯಬೇಕು. ಸಿಬಿಎಸ್‌ಸಿ ಪಠ್ಯಕ್ರಮ ಆರಂಭಿಸುವ ಬಗ್ಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಲಾಗಿದ. 10 ವರ್ಷದಿಂದ ರಾಜ್ಯದಲ್ಲಿ 108 ಪ್ರಥಮ ದರ್ಜೆ ಕಾಲೇಜುಗಳಿಗೆ ಸ್ವಂತ ಕಟ್ಟಡವಿರಲಿಲ್ಲ. ಈಗ 108 ಕಾಲೇಜುಗಳ ಕಟ್ಟಡ ನಿರ್ಮಾಣಕ್ಕೆ ₹ 600 ಕೋಟಿ ಅನುದಾನ ನೀಡಲಾಗಿದೆ. ಪ್ರಾಥಮಿಕ, ಪ್ರೌಢ ಶಾಲೆ ನಿರ್ಮಾಣಕ್ಕೆ ₹ 450 ಕೋಟಿ ನೀಡಲಾಗಿದೆ’ ಎಂದು ತಿಳಿಸಿದರು.

‘ವಾರದಲ್ಲಿ ಸಿ.ಎಂ ಎಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಸೆ. 20ಕ್ಕೆ ಎರಡು ಏತ ನೀರಾವರಿ ಯೋಜನೆ, ರಸ್ತೆ, ಕುಡಿಯುವ ನೀರಿನ ಯೋಜನೆಗಳಿಗೆ ಚಾಲನೆ ನೀಡಲಾಗುವುದು’ ಎಂದು ಹೇಳಿದರು.

‘ನಗರದಲ್ಲಿ ನನೆಗುದಿಗೆ ಬಿದ್ದಿರುವ ಹಬೀಬಿಯಾ ಸಾಮಿಲ್‌ ರಸ್ತೆ ಸೇರಿದಂತೆ ಇತರೆ ರಸ್ತೆಗಳ ಅಭಿವೃದ್ಧಿಗೆ ಸಂಸದರ ನಿಧಿಯಿಂದ ₹ 50 ಕೋಟಿ ಅನುದಾನ ಕೊಡಿಸಲಾಗಿದೆ. ಶೀಘ್ರ ಕಾಮಗಾರಿಗೆ ಚಾಲನೆ ನೀಡಲಾಗುವುದು’ ಎಂದು ಭರವಸೆ ನೀಡಿದರು.

ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಆರ್ಯ ಈಡಿಗ ಸಮಾಜಕ್ಕೆ ಬೆಂಗಳೂರಿನ ಸೋಲೂರು ಬಳಿ 14 ಎಕರೆ ಜಾಗ ನೀಡಿದ್ದರು. ವಿದ್ಯಾರ್ಥಿ ನಿಲಯ, ಸಮುದಾಯ ಭವನಕ್ಕೆ ನೆರವು ನೀಡಲಾಗುವುದು. ಸಮಾಜದ ಅಭಿವೃದ್ಧಿಗೆ ಶ್ರಮಿಸಿದ ಮಲ್ಲೇಶ್ ಮತ್ತು ಜೆ.ಪಿ.ನಾರಾಯಣಸ್ವಾಮಿ ಅವರ ಹೆಸರನ್ನು ವಿದ್ಯಾರ್ಥಿ ನಿಲಯ ಹಾಗೂ ಸಮುದಾಯ ಭವನಕ್ಕೆ ಇಡಬೇಕು’ ಎಂದು ಸಲಹೆ ನೀಡಿದರು.

ಈಡಿಗರ ಸಂಘದ ಅಧ್ಯಕ್ಷ ಎಂ.ತಿಮ್ಮೇಗೌಡ ಮಾತನಾಡಿ, ಈಡಿಗ ಸಮುದಾಯವನ್ನು ಇತರೆ ಸಮಾಜದಂತೆ ಸಮಾನತೆಯಿಂದ ಕೊಂಡೊಯ್ಯುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದರು.

ಸಂಘದ ಜಿಲ್ಲಾ ಅಧ್ಯಕ್ಷ ಟಿ.ಶಿವಕುಮಾರ್ ಮಾತನಾಡಿ, 1979ರಲ್ಲಿ ಕೊಡುಗೆ ನೀಡಿದ ಈ ಜಾಗದಲ್ಲಿ ₹ 1.20 ಕೋಟಿ ವೆಚ್ಚದ ಸಮುದಾಯ ಭವನ ಹಾಗೂ ₹ 90 ಲಕ್ಷ ವೆಚ್ಚದ ವಿದ್ಯಾರ್ಥಿನಿಲಯ ನಿರ್ಮಿಸಿ, ಸಮಾಜದ ಬಡ ಮಕ್ಕಳಿಗೆ ಉಚಿತ ಊಟ, ವಸತಿ ಸೌಲಭ್ಯ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಗೌರವಾಧ್ಯಕ್ಷ ಗೋವರ್ಧನ್ ಕುಮಾರ್, ಕೆಪಿಸಿಸಿ ಸಹ ಕಾರ್ಯದರ್ಶಿ ಸಿ.ವಿ.ರಾಜಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ್, ಜೆ.ಪಿ.ಡಿಸ್ಟಿಲರೀಸ್ ವ್ಯವಸ್ಥಾಪಕ ನಿರ್ದೇಶಕ ಜೆ.ಪಿ.ಸುಧಾಕರ್ ಇದ್ದರು.

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !