ಗುರುವಾರ, 10 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಸನ ಜಿಲ್ಲೆಯಲ್ಲಿ ಶೇ 80 ರಷ್ಟು ಸಾಕ್ಷರತೆ

ಅಂತರ ರಾಷ್ಟ್ರೀಯ ಸಾಕ್ಷರತಾ ದಿನಾಚರಣೆ: ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ
Published : 10 ಸೆಪ್ಟೆಂಬರ್ 2024, 14:10 IST
Last Updated : 10 ಸೆಪ್ಟೆಂಬರ್ 2024, 14:10 IST
ಫಾಲೋ ಮಾಡಿ
Comments

ಹಾಸನ: ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ನಗರದ ವಾರ್ತಾ ಭವನದ  ಆವರಣದಲ್ಲಿ ಮಂಗಳವಾರ ಬೆಳಿಗ್ಗೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಸಾಕ್ಷರತಾ ಧ್ವಜಾರೋಹಣ ನೆರವೇರಿಸಿದರು.

ಸಾಕ್ಷರತಾ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಅವರು, 2027 ರ ವೇಳೆಗೆ ದೇಶದ ಪ್ರತಿಯೊಬ್ಬ ಪ್ರಜೆಯನ್ನು ಸಾಕ್ಷರರನ್ನಾಗಿ ಮಾಡುವ ನಿಟ್ಟಿನಲ್ಲಿ ಈ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಹಾಸನ ಜಿಲ್ಲೆ ಸರಾಸರಿ ಶೇ 80 ರಷ್ಟು ಸಾಕ್ಷರತೆ ಹೊಂದಿದೆ. ಅನಕ್ಷರಸ್ಥರಿಗೆ ಅಕ್ಷರ ಕಲಿಸುವ ಕೆಲಸ ಮಾಡಲು ಸರ್ಕಾರದ ಜೊತೆಗೆ ಸಂಘ ಸಂಸ್ಥೆಗಳು ಕೂಡ ಕೈ ಜೋಡಿಸಬೇಕು. ಜಿಲ್ಲೆ ಹಾಗೂ ರಾಜ್ಯದಲ್ಲಿ ಸಾಕ್ಷರತೆ ಪ್ರಮಾಣವನ್ನು ಹೆಚ್ಚಿಸಲು ಎಲ್ಲರೂ ಸಹಕಾರ ನೀಡಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಆರ್. ಪೂರ್ಣಿಮಾ ಮಾತನಾಡಿ, ಸಾಕ್ಷರತಾ ಆಂದೋಲನ ಆರಂಭಿಸಿದ ದಿನದಿಂದಲೂ ಅನಕ್ಷರಸ್ಥರಿಗೆ ಅಕ್ಷರ ಕಲಿಸುವ ಕೆಲಸ ನಡೆಯುತ್ತಿದೆ. ಈ ವರ್ಷ ಹಾಸನ ಜಿಲ್ಲೆಯಲ್ಲಿ 30 ಸಾವಿರ ಜನರು ಸಾಕ್ಷರತೆ ಹೊಂದಲು ಸರ್ಕಾರದ ವತಿಯಿಂದ ಯೋಜನೆ ರೂಪಿಸಲಾಗಿದೆ ಎಂದರು.

ಹಾಸನ ಜಿಲ್ಲೆಯ ಗ್ರಾಮ ಪಂಚಾಯಿತಿಗಳ 223 ಚುನಾಯಿತ ಸದಸ್ಯರಿಗೆ ಸಾಕ್ಷರತೆ ನೀಡಲಾಗಿದೆ. 2027 ರ ವೇಳೆಗೆ ಇಡೀ ದೇಶದ ಪ್ರತಿಯೊಬ್ಬ ಪ್ರಜೆಯನ್ನು ಅಕ್ಷರಸ್ಥರನ್ನಾಗಿ ಮಾಡುವ ಗುರಿ ಹೊಂದಲಾಗಿದೆ ಎಂದರು.

ಅಕ್ಷರ ಜ್ಞಾನ ಇದ್ದಲ್ಲಿ ಮೂಢನಂಬಿಕೆ ಅಂಧಕಾರ ನಿವಾರಣೆ ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಅಕ್ಷರ ಕಲಿತು ಇತರರಿಗೂ ಕಲಿಸಬೇಕು.
ಸಿ.ಸತ್ಯಭಾಮಾ, ಜಿಲ್ಲಾಧಿಕಾರಿ

ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಚ್‌.ಕೆ. ಪಾಂಡು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕಿ ಮೀನಾಕ್ಷಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಈ.ಕೃಷ್ಣೇಗೌಡ, ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT